Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಪಪಂ ಚುನಾವಣೆ ಡಿಸೆಂಬರ್-19 ರಿಂದ 21 ರವರೆಗೆ ನಿಷೇಧಾಜ್ಞೆ ಜಾರಿ:ಡಿಸಿ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ಹಾಗೂ ದೊಡ್ಡಬಳ್ಳಾಪುರ ನಗರ ಸ್ಥಳೀಯ ಸಂಸ್ಥೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯರ ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಂಬಂಧ


ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತವಾಗಿ ಚುನಾವಣೆಯನ್ನು

ನಡೆಸುವ ನಿಟ್ಟಿನಲ್ಲಿ  2025 ನೇ ಡಿಸೆಂಬರ್ 19 ರ ಸಂಜೆ 05.00 ಗಂಟೆಯಿಂದ ಡಿಸೆಂಬರ್ 21 ರ ರಾತ್ರಿ 12.00 ಗಂಟೆಯವರೆಗೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆ 21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ. 

ನಿಷೇಧಾಜ್ಞೆ ಅವಧಿಯಲ್ಲಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆಯ21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭಗಳನ್ನು ಜರುಗಿಸುವುದನ್ನು ನಿಷೇಧಿಸಿದೆ.

ಸಾರ್ವಜನಿಕರು ಮತದಾನ ಮಾಡಲು ಅನುಕೂಲವಾಗುವಂತೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆಯ 21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ದಿನಾಂಕ:21.12.2025 ರಂದು ಸಂತೆ, ಜಾತ್ರೆಗಳನ್ನು ನಿಷೇಧಿಸಿದೆ.

ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ಹಾಗೂ ಸ್ಪೋಟಕ ವಸ್ತುಗಳನ್ನು ಕೊಂಡೊಯ್ಯುವುದನ್ನು ಪ್ರತಿಬಂಧಿಸಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಪೂರ್ವ ನಿಯೋಜಿತ ಮದುವೆ, ಧಾರ್ಮಿಕ ಕಾರ್ಯಕ್ರಮ/ಮೆರವಣಿಗೆಗಳನ್ನು ಮತ್ತು ಶವಸಂಸ್ಕಾರಗಳನ್ನು ಚುನಾವಣಾ ನೀತಿ ಸಂಹಿತ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ನಡೆಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ