LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಪ್ಪು ಲೋಹರಾ ಸೇರಿ ಮತ್ತಿಬ್ಬರು ಮೋಸ್ಟ್ ವಾಂಟೆಡ್ ನಕ್ಸಲರನ್ನ ಹತ್ಯೆ ಮಾಡಿದ ಭಧ್ರತಾ ಪಡೆ

ರಾಂಚಿ : ನಕ್ಸಲ್‌ ವಿರುದ್ಧ ಭದ್ರತಾ ಪಡೆಗಳು ಜಾರ್ಖಂಡ್‌ನಲ್ಲಿ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಮತ್ತೋರ್ವ ಮೋಸ್ಟ್ ವಾಂಟೆಡ್ ನಕ್ಸಲ್ ಪಪ್ಪು ಲೋಹ್ರಾನನ್ನು ಹತ್ಯೆಯಾಗಿದ್ದಾನೆ.

ಲತೇಹಾರ್‌ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಈ ಕಾರ್ಯಾಚರಣೆ ನಡೆದಿದೆ. ನಕ್ಸಲರಿಂದ ಭಾರಿ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಪಪ್ಪು ಲೋಹರಾ ಜೊತೆ ಆತನ ಸಹಚರ ಪ್ರಭಾತ್ ಗಂಜುನನ್ನೂ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಪ್ಪು ಲೋಹರಾ ಬಗ್ಗೆ ಸುಳಿವು ನೀಡಿದವರಿಗೆ ಜಾರ್ಖಂಡ್ ಪೊಲೀಸ್ 10 ಲಕ್ಷ ರೂ., ಪ್ರಭಾತ್ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ಘೋಷಣೆ ಮಾಡಲಾಗಿತ್ತು. ಈ ಇಬ್ಬರೂ ಉನ್ನತ ನಕ್ಸಲ್ ನಾಯಕರು ಜನ ಮುಕ್ತಿ ಪರಿಷತ್‌ ಸಂಘಟನೆಯ ನಕ್ಸಲ್ ರೂವಾರಿಗಳಾಗಿದ್ದರು ಎನ್ನಲಾಗಿದೆ.

ಜಾರ್ಖಂಡ್‌ನಲ್ಲಿ ಈ ಇಬ್ಬರೂ ನಕ್ಸಲ್‌ ಚಟುವಟಿಕೆಯ ಉನ್ನತ ಸ್ತರದ ನಾಯಕರಾಗಿದ್ದರು. ಇವರಿಬ್ಬರ ಮೇಲೆ ಹಲವು ಪ್ರಕರಣಗಳು ದಾಖಲಾಗಿದ್ದು, ಮೋಸ್ಟ್ ವಾಂಟೆಡ್ ನಕ್ಸಲ್ ಪಟ್ಟಿಗೆ ಸೇರಿದವರಾಗಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026