LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: 'ಉಸ್ತುವಾರಿ ವಿರುದ್ಧ ಕ್ರಮ'- ಪರಮೇಶ್ವರ್ ಕಿಡಿ

ಬೆಂಗಳೂರು : ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಕೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ. ಪದೇ ಇದೇ ಇದು ನಡೆಯುತ್ತಿದೆ. ಯಾರು ಉಸ್ತುವಾರಿ ಇದ್ದಾರೆ ಅವರ ವಿರುದ್ಧ ಕ್ರಮ ಆಗಲೇಬೇಕು ಎಂದು ಗೃಹ ಸಚಿವ ಪರಮೇಶ್ವರ್ ಕಿಡಿಕಾರಿದ್ದಾರೆ.

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪದೇಪದೇ ಹೀಗಾಗುತ್ತದೆ ಎಂದು ಹಿಂದೆಯೂ ಕ್ರಮ ತೆಗೆದುಕೊಂಡಿದ್ದೆವು. ದಯಾನಂದ್ ಅವರ ಜತೆ ನಿನ್ನೆ ಮಾತನಾಡಿದ್ದೇನೆ. ಇದು ನಾನ್‌ಸೆನ್ಸ್, ಇದನ್ನೆಲ್ಲ ಸಹಿಸಲು ಸಾಧ್ಯವಿಲ್ಲ" ಎಂದರು.

"ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ್ದು ದಯಾನಂದ್ ಅವರಿಂದ ವರದಿ ಕೇಳಿದ್ದೇನೆ. ನಾನೇ ಅಧಿಕಾರಿಗಳ ಸಭೆ ಕರೆಯುತ್ತೇನೆ. ದಯಾನಂದ್ ಅವರು ವರದಿ ಕೊಟ್ಟಮೇಲೆ ಪರಿಶೀಲನೆ ನಡೆಸುತ್ತೇವೆ. ವರದಿ ನಮಗೆ ಸಮಾಧಾನವಾಗದೇ ಇದ್ದರೆ ಉನ್ನತ ಮಟ್ಟದ ತನಿಖೆ ಮಾಡುತ್ತೇವೆ. ತನಿಖೆಗೆ ಸಮಿತಿ ರಚಿಸುತ್ತೇವೆ" ಎಂದು ಹೇಳಿದರು.

"ಇದು ಹಳೇ ವಿಡಿಯೋ ಎನ್ನುತ್ತಾರೆ. ಹಿಂದೆನೂ ಹಳೇ ವಿಡಿಯೋ ಬಂದಿತ್ತು. ಏನೇ ಇರಲಿ ಇದು ಯಾವುದೂ ನಡೆಯಬಾರದು. ಇದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ" ಎಂದು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026