LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಷತ್ ಚುನಾವಣೆ: ಜೂನ್ 18 ಕ್ಕೆ ಮತದಾನ

ಬೆಂಗಳೂರು,ಮೇ .26 : ರಾಜ್ಯದ ಏಳು ವಿಧಾನ ಪರಿಷತ್ ಸದಸ್ಯರ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಚುನಾವಣಾ ಆಯೋಗ ಇಂದು ವೇಳಾಪಟ್ಟಿ ಪ್ರಕಟಿಸಿದೆ.ಜೂ.18 ರಂದು ಮತದಾನ ನಡೆಯಲಿದೆ. ಅಂದೇ ಫಲಿತಾಂಶವೂ ಪ್ರಕಟಗೊಳ್ಳಲಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ಗೋವಿಂದ ರಾಜು, ನಾಸೀರ್ ಅಹಮ್ಮದ್, ಎನ್.ನಾಗರಾಜು, ಪ್ರತಾಪ ಸಿಂಹ ನಾಯಕ್ ಕೆ, ತಿಪ್ಪಣ್ಣಪ್ಪ, ಸುನೀಲ್ ವಲ್ಯಾಪುರ ಹಾಗೂ ಬಿ.ಕೆ.ಹರಿಪ್ರಸಾದ್ ಅವರ ಅವ ಜೂ.30 ರಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಚುನಾವಣೆಯ ವೇಳಾಪಟ್ಟಿ:
ಅಸೂಚನೆ: ಜೂ.1 (ಸೋಮವಾರ), 2026 , ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಜೂ.8 , ನಾಮಪತ್ರ ಪರಿಶೀಲನೆ: ಜೂ.9 , ನಾಮಪತ್ರ ಹಿಂಪಡೆಯಲು ಕೊನೆ ದಿನ: ಜೂ.11, ಮತದಾನ: ಜೂ.18, ಮತದಾನ: ಬೆಳಿಗ್ಗೆ 9 ರಿಂದ ಸಂಜೆ 4 ರ ವರೆಗೆ, ಮತ ಎಣಿಕೆ: ಜೂ.18.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST