Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಇಂದಿನಿಂದ ಸಂಸತ್ತು ಚಳಿಗಾಲದ ಅಧಿವೇಶನ

ನವದೆಹಲಿ: ಸೋಮವಾರದಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಕೇಂದ್ರ ಸರ್ಕಾರವು ನಾಗರಿಕ ಅಣು ಕ್ಷೇತ್ರದಲ್ಲಿ ಖಾಸಗಿ ಯವರಿಗೂ ಅವಕಾಶ ನೀಡುವಂಥ ವಿಧೇಯಕಸೇರಿ 10 ವಿವಿಧ ಮಸೂದೆಗಳ ಅಂಗೀಕಾರಕ್ಕೆ ಸಜ್ಜಾಗಿದೆ. ಆದರೆ, ಪ್ರತಿಪಕ್ಷಗಳು ದೇಶದ 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ, ಮತಕಳವು ವಿಚಾರ ಮುಂದಿಟ್ಟುಕೊಂಡು ತೀವ್ರ ಗದ್ದಲ ನಡೆಸುವ ಸಾಧ್ಯತೆ ಇದೆ.

ಕಳೆದ ಬಾರಿಯ ಮಾನ್ಸೂನ್ ಅಧಿವೇಶನದ ಹೆಚ್ಚಿನ ಕಲಾಪವು ಆಪರೇಷನ್ ಸಿಂದೂರ ಹಾಗೂ ಮತಪಟ್ಟಿ ಪರಿಷ್ಕರಣೆ ವಿಷಯಗಳ ಕಾರಣ, ಪ್ರತಿಪಕ್ಷಗಳ ಗದ್ದಲ ದಿಂದಾಗಿ ವ್ಯರ್ಥವಾಗಿತ್ತು. ಆದರೆ ಇದೀಗ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸಿಕ್ಕ ಅಭೂತಪೂರ್ವ ಗೆಲುವಿನಿಂದ ಬೀಗುತ್ತಿರುವ ಎನ್‌ಡಿಎ ಮೈತ್ರಿಕೂಟ, ಈ ಅಧಿವೇಶನದಲ್ಲಿ ತನ್ನ ಸುಧಾರಣಾ ನೀತಿಗಳನ್ನು ಇನ್ನಷ್ಟು ಗಟ್ಟಿ ಧ್ವನಿಯಲ್ಲಿ ಪ್ರಸ್ತುತ ಪಡಿಸುವ ನಿರೀಕ್ಷೆ ಇದೆ.

ಈ ನಡುವೆ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಎಲ್ಲಾ ಪಕ್ಷಗಳ ಸಂಸದೀಯ ನಾಯಕರ ಜತೆಗೆ ಮಾತುಕತೆ ನಡೆಸಿದ್ದು, ಕಲಾಪವನ್ನು ಸುಗಮವಾಗಿ ನಡೆಸಲು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಎಸ್‌ಐಆ‌ರ್ ವಿಚಾರದಲ್ಲಿ ಗದ್ದಲ: ಕಳೆದ ಬಾರಿ ಯಂತೆ ಈ ಬಾರಿಯೂ ಕಾಂಗ್ರೆಸ್ ಹಾಗೂ ಇತರೆ ಸರ್ವಪಕ್ಷ ಸಭೆಯಲ್ಲಿ ವಿಪಕ್ಷ ಸಂಸದರ ಜತೆ ರಿಜಿಜು
ಪ್ರತಿಪಕ್ಷಗಳು ಮತಗಳವು ಹಾಗೂ ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುವ ನಿರೀಕ್ಷೆ ಇದೆ. ಕಳೆದ ಅಧಿವೇಶನದಲ್ಲಿ ಬಿಹಾರದಲ್ಲಿ ನಡೆಯುತ್ತಿದ್ದ ಎಸ್‌ಐಆ‌ರ್ ಅನ್ನು ಕಾಂಗ್ರೆಸ್ ನೇತೃತ್ವ ದಲ್ಲಿ ಪ್ರತಿಪಕ್ಷಗಳು ಬಹಿರಂಗವಾಗಿ ವಿರೋಧಿಸಿದ್ದವು. ಇದೀಗ ದೇಶಾದ್ಯಂತ ಎಸ್‌ಐಆರ್‌ಗೆ ಚಾಲನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಮತ್ತೆ ಈ ವಿಚಾರವಾಗಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುವ ನಿರೀಕ್ಷೆ ಇದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ