Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಪಶು ವಿವಿ ಕೋಟಿ ಕೋಟಿ ಅವ್ಯವಹಾರ: ಮಾಜಿ ವಿಸಿ ಸೇರಿ 6 ಮಂದಿ ಅರೆಸ್ಟ್

ಬೀದರ್: ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ Bidar ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂ. ಅವ್ಯವಹಾರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಲೋಕಾಯುಕ್ತ ಪೊಲೀಸರು ಮಾಜಿ ಉಪಕುಲಪತಿ ಸೇರಿದಂತೆ ಆರು ಮಂದಿಯನ್ನು ಬಂಧಿಸಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಮಾಜಿ ಉಪಕುಲಪತಿ ಪ್ರೊ. ಹೆಚ್.ಡಿ. ನಾರಾಯಣಸ್ವಾಮಿ, ಹಣಕಾಸು ನಿಯಂತ್ರಣಾಧಿಕಾರಿಯಾಗಿದ್ದ ಕೆ.ಎಲ್. ಸುರೇಶ್ ಹಾಗೂ ಮೃತ್ಯುಂಜಯ ಹಿರೇಮಠ, ಬೊಪಣ್ಣ, ಮಂಜುನಾಥ, ರಾಮಗೊಂಡ ಬಂಧಿತ ಆರೋಪಿಗಳಾಗಿದ್ದಾರೆ.

ಏನಿದು ಹಗರಣ?
2017-18ರ ಅವಧಿಯಲ್ಲಿ ವಿಶ್ವವಿದ್ಯಾಲಯದ ವಿವಿಧ ಸಾಮಗ್ರಿಗಳ ಖರೀದಿಯಲ್ಲಿ ಭಾರಿ ಅಕ್ರಮ ಎಸಗಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಯಾವುದೇ ವಸ್ತುಗಳನ್ನು ಖರೀದಿಸದೇ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣ ದುರ್ಬಳಕೆ ಮಾಡಲಾಗಿದೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. 2021ರಲ್ಲಿ ಲೋಕಾಯುಕ್ತ ದಾಳಿ ನಡೆಸಿದ ಬಳಿಕ ಪ್ರಕರಣ ಗಂಭೀರ ತಿರುವು ಪಡೆದುಕೊಂಡಿದ್ದು, 2025ರ ಸೆಪ್ಟೆಂಬರ್ 10ರಂದು ರಾಜ್ಯದ 25ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಈ ಪ್ರಕರಣದಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳು, ಸಿಬ್ಬಂದಿ ಮತ್ತು ಖಾಸಗಿ ಸಂಸ್ಥೆಗಳ ಮಾಲೀಕರ ನಡುವೆ ಸಂಚು ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ನಕಲಿ ದಾಖಲೆಗಳ ಆಧಾರದಲ್ಲಿ ಹಣ ವರ್ಗಾವಣೆ ನಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ Bidar ಜಿಲ್ಲಾ ಸತ್ರ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು. ಅದರ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ.

ಲೋಕಾಯುಕ್ತ ಎಡಿಜಿಪಿ ಮನೀಷ್ ಕರಬಿಕರ್, ಐಜಿಪಿ ಡಾ. ಎ.ಎಸ್. ಸುಬ್ರಮಣ್ಣೇಶ್ವರ ಹಾಗೂ ಎಸ್‌ಪಿ ಬದ್ರಿನಾಥ್ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆದಿದ್ದು, ಎಸ್‌ಪಿ ಸಿದ್ದರಾಜು ನೇತೃತ್ವದಲ್ಲಿ ಡಿಎಸ್ಪಿ ಹಣಮಂತರಾಯ ಮತ್ತು ತಂಡ ಕಾರ್ಯಾಚರಣೆ ಯಶಸ್ವಿಗೊಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ