LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ, ಆಂತರಿಕವಾಗಿ ವಿರೋಧಿಸುತ್ತಿದ್ದಾರೆ'- ಸಿಎಂ

ಬೆಂಗಳೂರು:ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯ ಇರುವವಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.‌

ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು.ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಬಸವಣ್ಣನವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದ್ದು ನಮ್ಮದೇ ಕಾಂಗ್ರೆಸ್ ಸರ್ಕಾರ ಎಂದರು.

ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ.ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೇ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ ಎಂದರು.

ಜಾತಿ ವ್ಯವಸ್ಥೆ ಬಹಳ ಗಟ್ಟಿಯಾಗಿ ಬೇರೂರಿದೆ. ಇದಕ್ಕೆ ಪಟ್ಟಭದ್ರರು ನೀರು ಗೊಬ್ಬರ ಹಾಕುತ್ತಿದ್ದಾರೆ. ಜಾತ್ಯತೀತ, ಸಮ ಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ಪೂರಕ.ನಮ್ಮ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಜಾತಿ ಜಡತ್ವ, ಆರ್ಥಿಕ ಜಡತ್ವ ಇರುವ ಸಮಾಜದಲ್ಲಿ ಚಲನೆ ಸಾಧ್ಯವಿಲ್ಲ.ಬಸವಣ್ಣನವರ ವಿಚಾರಗಳೇ ಅಂಬೇಡ್ಕರ್ ವಿಚಾರಗಳಾಗಿದ್ದು ಇವೆಲ್ಲವೂ ಸಂವಿಧಾನದಲ್ಲಿ ಅಡಕವಾಗಿವೆ ಎಂದರು.

ಗೋರುಚ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿದ್ದು ನಾವು. ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ವೇದಿಕೆ. ಯಾರ ಒತ್ತಾಯವೂ ಇಲ್ಲದ ವೇಳೆಯಲ್ಲೇ ನಮ್ಮ ಸರ್ಕಾರ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿತ್ತು.
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ ಎಂದರು

ಸ್ವಾಮೀಜಿಗಳ ನಿಯೋಗದ ಬೇಡಿಕೆಗಳು..

ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿತರಾಗಿರುವ ವಿಶ್ವಗುರು ಬಸವೇಶ್ವರರ ವಿಚಾರಧಾರೆಯನ್ನು ಪರಿಣಾಮಕಾರಿಯಾಗಿ ಜನಮಾನಸಕ್ಕೆ ತಲುಪಿಸುವ ನಿಟ್ಟಿನಲ್ಲಿ ಈ ವರ್ಷದ ಬಜೆಟ್ ನಲ್ಲಿ ರೂ 100 ಕೋಟಿ ನೀಡುವ ಜೊತೆಗೆ, ಮುಂದಿನ ನಾಲ್ಕು ವರ್ಷಗಳ ಬಜೆಟ್ ನಲ್ಲಿ ತಲಾ 100 ಕೋಟಿಯಂತೆ ಒಟ್ಟು ರೂ 500 ಕೋಟಿ ಅನುದಾನ ನೀಡಬೇಕು.

ಮುಖ್ಯಮಂತ್ರಿ ಭೇಟಿಗೂ ಮುನ್ನ ಈ ಸಂಬಂಧ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ರೇಸ್ ಕೋರ್ಸ್ ರಸ್ತೆಯ ಅಧಿಕೃತ ನಿವಾಸದಲ್ಲಿ ಬೆಳಿಗ್ಗೆ ಮಠಾಧೀಶರು, ಸಮುದಾಯದ ಸಚಿವರು, ಶಾಸಕರು ಸಭೆ ನಡೆಸಿದರು. ರಾಜ್ಯದೆಲ್ಲೆಡೆಯಿಂದ ಆಗಮಿಸಿದ್ದ ಸಮುದಾಯದ ಸ್ವಾಮೀಜಿಗಳು, ಶಾಸಕರು, ಮಾಜಿ ಶಾಸಕರು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡು ಚರ್ಚಿಸಿದರು. ನಂತರ, ಮುಖ್ಯಮಂತ್ರಿಯವರ ಅಧಿಕೃತ ನಿವಾಸ ‘ಕಾವೇರಿ’ಗೆ ತೆರಳಿ ಮನವಿ ಸಲ್ಲಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST