Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಹಿರಂಗದಲ್ಲಿ ಭಗವಂತನ ಹುಡುಕಾಟ ಬೇಡ : ಗುರುಸಿದ್ದ ಪಟ್ಟದಾರ್ಯ ಮಹಾಸ್ವಾಮಿಗಳು

ಬೆಳಗಾವಿ:ಹಸುವಿನ ಹಾಲಿನೊಳಗೆ ತುಪ್ಪ ಅಡಗಿರುವಂತೆ, ಕಲ್ಲು‌ಮಣ್ಣಿನೊಳಗೆ ಬಂಗಾರ ಇರುವಂತೆ ಭಗವಂತ ನಮ್ಮ ಅಂತರಾತ್ಮದೊಳಗೆ ಇದ್ದು, ಬಹಿರಂಗದಲ್ಲಿ ಅವನ ಹುಡುಕಾಟ ಮಾಡಬಾರದು ಎಂದು ಗುಳೇದಗುಡ್ಡ ಗುರುಸಿದ್ದೇಶ್ವರ ಬ್ರಹನ್ಮಠದ ಜಗದ್ಗುರು ಗುರುಸಿದ್ಧ ಪಟ್ಟದಾರ್ಯ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಅವರು ಶನಿವಾರ ಇಲ್ಲಿನ ಶಿವಬಸವ ನಗರದ ಆರ್‌.ಎನ್. ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಆಯೋಜಿಸಿದ್ದ ಕಾಯಕಯೋಗಿ ಡಾ. ಶಿವಬಸವ ಮಹಾಸ್ವಾಮಿಗಳವರ 136 ನೇ ಜಯಂತಿ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ವಚನದರ್ಶನ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ನೇತೃತ್ವ ವಹಿಸಿ ಮಾತನಾಡಿದ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ನಾಗನೂರು ಗ್ರಾಮದಲ್ಲಿದ್ದ ಡಾ. ಶಿವಬಸವ ಮಹಾಸ್ವಾಮಿಗಳು ಬೆಳಗಾವಿಗೆ ಬಂದು ಉಚಿತ ಪ್ರಸಾದ ನಿಲಯ ತೆರೆಯದೆ ಇದ್ದಿದ್ದರೆ ಇಂದು ಲಕ್ಷಾಂತರ ಜನ ಶಿಕ್ಷಣದಿಂದ ವಂಚಿತರಾಗುತ್ತಿದ್ದರು. ಬಡ ಮಕ್ಕಳಿಗೆ ಅಣ್ಣ, ಅರಿವು, ಆಶ್ರಯ ಹಾಗೂ ಶಿಕ್ಷಣ ನೀಡಿದ್ದಲ್ಲದೆ ಸ್ವಾತಂತ್ರ ಹೋರಾಟ, ಕನ್ನಡ ಚಳುವಳಿಗಳಲ್ಲೂ ಡಾ. ಶಿವಬಸವ ಮಹಾಸ್ವಾಮಿಗಳು ಸಕ್ರಿಯರಾಗಿದ್ದರು ಎಂದರು.

ಸಮಾರಂಭದಲ್ಲಿ ಪ್ರವಚನ ನೀಡಿದ ಮುಮ್ಮಿಗಟ್ಟಿ ಬಸವ ಯೋಗಾಶ್ರಮದ ಬಸವಾನಂದ ಮಹಾಸ್ವಾಮಿಗಳು ಮಾತನಾಡಿ ಅನುಭಾವದ ಮೇರು ಪರ್ವತ ವಾಗಿರುವ ವಚನಗಳಲ್ಲಿ ಜ್ಞಾನದ ಬೆಳಕಿದೆ. ಬದಕಲು ದಾರಿಯಿದೆ ಹಾಗೂ ಸಮಾಜದ ಜಟಿಲ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರವಿದೆ. ಕಾರಣ ವಚನಗಳನ್ನು ನೈಜ ರೂಪದಲ್ಲಿ ಅರ್ಥೈಸಿಕೊಂಡು ಜೀವನ ಸಾಗಿಸಬೇಕು ಎಂದರು.

ಚೆನ್ನಮ್ಮನ ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಲಬುರಗಿ ಕೌಲಗಾದ ವೀರಸಿದ್ದ ದೇವರು ವೇದಿಕೆ ಮೇಲೆ ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಚಂದ್ರಗಿರಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎ. ಎಲ್. ಪಾಟೀಲ ಸ್ವಾಗತಿಸಿದರು. ವಿಜ್ಞಾನ ಕೇಂದ್ರದ ರಾಜಶೇಖರ ಪಾಟೀಲ ನಿರೂಪಿಸಿದರು.ಕೊನೆಗೆ ಪ್ರಾಧ್ಯಾಪಕ ಎ.ಕೆ. ಪಾಟೀಲ ವಂದಿಸಿದರು.

ವಚನ ಕಟ್ಟುಗಳ ಮೆರವಣಿಗೆ :
ಸಮಾರಂಭಕ್ಕೂ ಮುಂಚೆ ಡಾ. ಶಿವಬಸವ ಮಹಾಸ್ವಾಮಿಗಳ 136ನೇ ಜಯಂತಿ ಮಹೋತ್ಸವದ ಅಂಗವಾಗಿ ಶ್ರೀನಗರ ಉದ್ಯಾನವನದಿಂದ ಭವ್ಯ ಮೆರವಣಿಗೆಗೆ ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಚಾಲನೆ ನೀಡಿದರು. ಬಸವಾದಿ ಶರಣರ ವಚನಕಟ್ಟುಗಳು ಮೆರವಣಿಗೆಯ ಮೆರಗು ಹೆಚ್ಚಿಸಿದರೆ, ಡೊಳ್ಳು ಸೇರಿದಂತೆ ಜಾನಪದ ಕಲಾ ತಂಡಗಳ ಪ್ರದರ್ಶನಗಳು ಜನರ ಗಮನ ಸೆಳೆದವು. ಮೆರವಣಿಗೆಯಲ್ಲಿ 20 ಕ್ಕೂ ಹೆಚ್ಚು ಸ್ವಾಮೀಜಿಗಳು, ವಿವಿಧ ಬಸವಪರ ಸಂಘಟನೆಗಳ ಪದಾಧಿಕಾರಿಗಳು, ಮಾತೃ ಮಂಡಳಿ ಹಾಗೂ ಮಹಿಳಾ ಮಂಡಳಿಗಳ ಸದಸ್ಯರು ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ