ಮೂಡಲಗಿ : ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಕಬ್ಬಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಆಗ್ರಹಿಸಿದರು.
ಗುರುವಾರದಂದು ಪಟ್ಟಣಕ್ಕೆ ಸಮೀಪವಿರುವ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಬ್ಬು ಬೆಳೆಯಲು ರೈತರು ಬೀಜ, ಗೊಬ್ಬರ, ಔ?ಧ, ನೀರಾವರಿ, ಕೂಲಿ ಹಾಗೂ ಸಾಗಣೆ ಸೇರಿದಂತೆ ಹೆಚ್ಚಿನ ವೆಚ್ಚವನ್ನು ಭರಿಸುತ್ತಿದ್ದಾರೆ. ಆದರೆ, ಉತ್ಪಾದನಾ ವೆಚ್ಚಕ್ಕೆ ಅನುಗುಣವಾದ ಬೆಲೆ ದೊರೆಯದಿರುವುದು ರೈತರ ಆರ್ಥಿಕ ಸಂಕ?ಕ್ಕೆ ಕಾರಣವಾಗಿದೆ. ಹೀಗಾಗಿ ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರ ಸಮಸೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು. ಕೇಂದ್ರ ಸರ್ಕಾರ ನಿಗದಿಪಡಿಸುವ ಎಫ್.ಆರ್.ಪಿ (ನ್ಯಾಯಯುತ ಮತ್ತು ಲಾಭದಾಯಕ ಬೆಲೆ) ಕಬ್ಬು ಬೆಳೆಗಾರರಿಗೆ ದೊರೆಯಬೇಕಾದ ಮೂಲ ಬೆಲೆಯಾಗಿದೆ. ಕಬ್ಬು ಬೆಳೆಗಾರರ ಹೋರಾಟವನ್ನು ರಾಜಕೀಯ ದೃಷ್ಟಿಯಿಂದ ನೋಡುವ ಬದಲು, ರೈತರ ಬದುಕು ಮತ್ತು ಕೃಷಿಯ ಆರ್ಥಿಕ ಸ್ಥಿರತೆಯ ದೃಷ್ಟಿಯಿಂದ ಸರ್ಕಾರ ಸ್ಪಂದಿಸಬೇಕು ಎಂದು ಲಕ್ಕಣ್ಣ ಸವಸುದ್ದಿ ಹೇಳಿದರು.
ಸಾಮಾಜಿಕ ಹೋರಾಟಗಾರ ಗುರುನಾಥ ಗಂಗಣ್ಣವರ ಮಾತನಾಡಿ ಹಲವು ದಿನಗಳಿಂದ ಕೇವಲ ರೈತರು ಮಾತ್ರ ತಮ್ಮ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತ ಬರುತ್ತಿದ್ದಾರೆ. ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ರೈತ ಸಂಘಟನೆಗಳು ಜಂಟಿಯಾಗಿ ಹೋರಾಟ ನಡೆಸಿ ಸರ್ಕಾರದ ಗಮನ ಸೆಳೆಯುವ ಮೂಲಕ ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದರು.
ಯುವ ಮುಖಂಡರಾದ ಲಿಂಗರಾಜ ಅಂಗಡಿ ಮಾತನಾಡಿ ಕಬ್ಬಿನ ಬೆಲೆ ನಿಗದಿ ವಿ?ಯದಲ್ಲಿ ಕೇಂದ್ರದ ಎಫ್ಆರ್ಪಿ ಮಾತ್ರವಲ್ಲದೆ, ರಾಜ್ಯ ಸರ್ಕಾರದ ಎಸ್.ಎ.ಪಿ ಕೂಡ ಮಹತ್ವದ್ದಾಗಿದೆ. ರೈತರ ಉತ್ಪಾದನಾ ವೆಚ್ಚ, ಮಾರುಕಟ್ಟೆ ಪರಿಸ್ಥಿತಿ ಮತ್ತು ಸಕ್ಕರೆ ಉದ್ಯಮದ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ ಸರ್ಕಾರಗಳು ರೈತರಿಗೆ ಅನುಕೂಲವಾಗುವಂತಹ ದರ ನಿಗದಿ ಪಡಿಸಬೇಕು. ಜೊತೆಗೆ ಎಂ.ಎಸ್.ಸ್ವಾಮಿನಾಥನ್ ವರದಿ ಕೂಡಲೇ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರೈತ ಯುವ ಮುಖಂಡರುಗಳಾದ ಹಾಲಪ್ಪ ಪೂಜೇರಿ, ಮಲ್ಲಪ್ಪ ಹಾದಿಮನಿ, ಶಿವಪುತ್ರ ಹಳ್ಳೂರ, ಅಶೋಕ ಪೂಜೇರಿ, ಬಸವರಾಜ ಅಂಗಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಫೊಟೋ ಫೈಲ್ ನೇಮ್ : ೮ ಮೂಡಲಗಿ ೧