ಬೆಳಗಾವಿ:
ಮಕ್ಕಳ ಕಲಿಕಾ ಹಿತದೃಷ್ಟಿಯಿಂದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರು ಮಾಡುವಂತೆ ಆಗ್ರಹಿಸಿ ಬಾಗೇವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ. ಪಾಟೀಲ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವಿಶಾಲವಾಗಿದ್ದು ಇಲ್ಲಿನ ಬಾಗೇವಾಡಿ ಬ್ಲಾಕ್ ನಲ್ಲಿ ಮೊರಾರ್ಜಿ ವಸತಿ ಶಾಲೆ ಇಲ್ಲ. ಬೆಳಗಾವಿ ತಾಲೂಕಿನ ಇತರೆಡೆಯ ವಸತಿ ಶಾಲೆಗಳಲ್ಲಿ ಪ್ರವೇಶ ಸಿಗದೆ ಗ್ರಾಮೀಣ ಕ್ಷೇತ್ರದ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ.
ಹೀಗಾಗಿ ಬಾಗೇವಾಡಿ ಬ್ಲಾಕ್ ವ್ಯಾಪ್ತಿಯ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಅವಶ್ಯಕತೆ ಇದ್ದು ಮಂಜೂರು ಮಾಡಿಸುವಂತೆ ಸಿ.ಸಿ. ಪಾಟೀಲ ಕೋರಿದರು.
ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಇದ್ದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.