LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಿಜಿ ವೈದ್ಯಕೀಯ ಕೋರ್ಸ್ : ದಾಖಲೆ ಸಲ್ಲಿಸಲು ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ನ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹರಿಗೆ ಅವರ ರಾಂಕ್ ಆಧಾರದ ಮೇಲೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆ ಸಲ್ಲಿಸಲು ಡಿ.6ರಿಂದ 17ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಚಾಯ್ಸ್-2 ಆಯ್ಕೆ ಮಾಡಿ ಶುಲ್ಕ ಪಾವತಿಸಿರುವವರು ಹಾಗೂ ಯಾವುದೇ ಸೀಟು ಹಂಚಿಕೆಯಾಗದೇ ಇರುವವರು ಮೂಲ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಚಾಯ್ಸ್ - 2 ಮತ್ತು 3 ಅನ್ನು ಆಯ್ಕೆ ಮಾಡಿಕೊಂಡವರು ಡಿ.6, 7 ಮತ್ತು 9 ರಂದು ದಾಖಲೆ ಸಲ್ಲಿಸಬೇಕು.

ಸೀಟು ಹಂಚಿಕೆಯಾಗದವರು ಡಿ.10ರಿಂದ 17ರವರಗೆ ದಾಖಲೆ ಸಲ್ಲಿಸಬೇಕು. ನಿಗದಿತ ದಿನಾಂಕಗಳಂದು ಮೂಲ ದಾಖಲೆ ಸಲ್ಲಿಸದಿದ್ದಲ್ಲಿ 2ನೇ ಸುತ್ತಿನ ಸೀಟು ಹಂಚಿಕೆಗೆ ಅಂತಹವರನ್ನು ಪರಿಗಣಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎಂಬಿಎ, ಎಂಸಿಎ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸ್ ಗಳ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಶುಲ್ಕ ಪಾವತಿಸಲು ಡಿ.6ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಪ್ರಸನ್ನ ತಿಳಿಸಿದ್ದಾರೆ.

ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ‌ ಮಾಡಿಕೊಳ್ಳಲು ಡಿ.7 ಕೊನೆ ದಿನ. ಇದರ ನಂತರ ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡುವುದಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಿಜಿ ಆಯುಷ್ ಕೋರ್ಸ್ ಗಳ ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆಗೆ ಡಿ.5ರ ಬೆಳಿಗ್ಗೆ 9ರವರೆಗೆ ಇಚ್ಛೆಗಳನ್ನು (Options) ದಾಖಲಿಸಲು ಮತ್ತೊಮ್ಮೆ ಪೋರ್ಟಲ್ ತೆರೆಯಲಾಗಿದೆ. ಅದೇ ದಿನ ಸಂಜೆ 4ರ ನಂತರ ಈ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಸನ್ನ ವಿವರಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ