ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಅ.12ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ತಿಳಿಸಿದ್ದಾರೆ.
ಶುಲ್ಕ ಪಾವತಿ ನಂತರ ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಂಡು ಕಾಲೇಜಿನಲ್ಲಿ ಪ್ರವೇಶ ಪಡೆಯುವುದಕ್ಕೂ ಅಂದು ಸಂಜೆ 6ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.