Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕೇಂದ್ರ ಸರಕಾರದ ಯೋಜನೆಗಳ ಕುರಿತು ಛಾಯಾಚಿತ್ರ ಪ್ರದರ್ಶನ: ಕ್ಷೇತ್ರ ಪ್ರಚಾರ ಅಧಿಕಾರಿ ಶೃತಿ

 

ಬೆಳಗಾವಿ :
ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಭಾರತ ಸರ್ಕಾರ ಧಾರವಾಡವು ಬೆಳಗಾವಿಯಲ್ಲಿ ಸ್ವಾತಂತ್ರ್ಯೋತ್ಸವ ಹಾಗೂ ಕೇಂದ್ರ ಸರ್ಕಾರದ ಇತರೆ ಯೋಜನೆಗಳ ಕುರಿತು ಐದು ದಿನಗಳ ಛಾಯಾಚಿತ್ರ ಪ್ರದರ್ಶನ ಹಾಗೂ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿ ಕಾರ್ಯಕ್ರಮವನ್ನು ಆಗಸ್ಟ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರ ಪ್ರಚಾರ ಅಧಿಕಾರಿ ಶೃತಿ ಎಸ್ ಟಿ. ತಿಳಿಸಿದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ವಿಷಯ ತಿಳಿಸಿದರು.

ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಜಿಲ್ಲಾಡಳಿತದ ಸಹಯೋಗದೊಂದಿಗೆ ಆಗಸ್ಟ್ ನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರಕಾರದ ಯೋಜನೆಗಳ ಕುರಿತು ಜನರಿಗೆ ಮಾಹಿತಿಯನ್ನು ನೀಡಲಾಗುವುದು ಎಂದು ಹೇಳಿದರು.

ಜನಪ್ರತಿನಿಧಿಗಳು ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿಸಲಿದ್ದಾರೆ. ಛಾಯಾಚಿತ್ರ ಪ್ರದರ್ಶನದ ಜತೆಗೆ ಐದು ದಿನಗಳ ಕಾಲ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಸಲಾಗುವುದು ಎಂದು ಶೃತಿ ತಿಳಿಸಿದರು.
ಐದು ದಿನಗಳ ಛಾಯಾಚಿತ್ರ ಪ್ರದರ್ಶನ ಹಾಗೂ ಮಾಹಿತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚನೆಯನ್ನು ನೀಡಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ