E-PAPER
17 Nov 2026, 05:23:12 PM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಫ್ರೀಡಂಫಾರ್ಕ್ ನಲ್ಲಿ ಪ್ರತಿಭಟನಾನಿರತರ ಭೇಟಿ ಮಾಡಿದ ಸಚಿವರು

*ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಸರ್ಕಾರದ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

 

ಬೆಂಗಳೂರು-07: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವುದೇ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಚಿವರು ಭೇಟಿ ನೀಡಿ, ಮನವಿ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಸಲು ಸರ್ಕಾರಕ್ಕೆ ಸಹಾನುಭೂತಿ ಇದೆ. ವೈಯಕ್ತಿಕವಾಗಿ ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಪರ ನಿಲ್ಲುತ್ತೇನೆ ಎಂದು ಅವರು ಭರವಸೆ ನೀಡಿದರು.

* *ಬಜೆಟ್‌ನಲ್ಲಿ ಸಮಾಧಾನಕರ*
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನವನ್ನು ಬಜೆಟ್ನಲ್ಲಿ ಹೆಚ್ಚಿಸಲಾಗಿದೆ. 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗಲೇ ವೇತನ ಹೆಚ್ಚಿಸಲಾಗಿತ್ತು. ಈಗಲೂ ಸಿದ್ದರಾಮಯ್ಯನನವರೇ ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಗೌರವಧನ ಏರಿಕೆಯಾಗುವ ವಿಶ್ವಾಸವಿದೆ ಎಂದು ಸಚಿವರು ಹೇಳಿದರು.

* *ನಾಳೆ ಗ್ರ್ಯಾಚುಯಿಟಿ ವಿತರಣೆ*
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ನಾಳೆ (ಮಾರ್ಚ್ 8) ಸಾಮೂಹಿಕವಾಗಿ ಗ್ರ್ಯಾಚುಯಿಟಿ ವಿತರಿಸಲಾಗುವುದು ಎಂದು ಹೇಳಿದ ಸಚಿವರು, ನಿವೃತ್ತಿಯಾದವರಿಗೆ ಇಡಿಗಂಟು ಹಣ ನೀಡುವುದರ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದರು.

ರಾಜ್ಯದಲ್ಲಿ 17 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸುವ ಯೋಚನೆಯಿದೆ. ಈ ಮೂಲಕ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಹಾಯವಾಗಲಿದೆ. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಪ್ರಚಾರ ಕೈಗೊಳ್ಳಬೇಕಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಈ ವೇಳೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮೀ, ಕಾರ್ಯಾಧ್ಯಕ್ಷೆ ಶಾಂತಾ ಎಸ್. ಘಂಟಿ, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದಾ, ಖಜಾಂಚಿ ಕಮಲಾ ಇನ್ನಿತರ ಪದಾಧಿಕಾರಿಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಪ್ರವೇಶ ಮತ್ತು ಅಭಿಮುಖೀಕರಣ ಕಾರ್ಯಕ್ರಮವೀರ ವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ - 2026ಮಂಡೋಳ್ಳಿಯಲ್ಲಿ ₹1.70 ಕೋಟಿ ವೆಚ್ಚದಲ್ಲಿ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ