ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಯುವತಿ ಗರ್ಭಿಣಿ- ಸಹಪಾಠಿಯ ವಿರುದ್ಧ ಪ್ರಕರಣ ದಾಖಲು..!
ಮಂಗಳೂರು : ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭಿಣಿಯಾದ ಬಳಿಕ ಯುವಕ ವಿವಾಹವಾಗಲು ನಿರಾಕರಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.ಬಪ್ಪಳಿಗೆ ನಿವಾಸಿ ಕೃಷ್ಣರಾವ್ (21) ಮತ್ತು ಸಂತ್ರಸ್ತ ಯುವತಿ(21) ಇಬ್ಬರೂ ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. 2024ರ ಅ.11ರಂದು ಆರೋಪಿ ಕೃಷ್ಣ ಸಂತ್ರಸ್ತ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡು ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಕೆಲವು ತಿಂಗಳ ನಂತರ ಸಂತ್ರಸ್ತೆ ಗರ್ಭಿಣಿಯಾಗಿದ್ದು, ವಿಚಾರವನ್ನು ಆರೋಪಿ ಕೃಷ್ಣನಿಗೆ ತಿಳಿಸಿದ್ದಾನೆ. ಈ ವೇಳೆ ಮನೆಯವರ ಬಳಿ ಈ ವಿಚಾರ ಹೇಳದಿದ್ದರೆ ತಾನು ಮದುವೆಯಾಗುವುದಾಗಿ ಹೇಳಿದ್ದ. ಆದರೆ, ಆಕೆ ಈಗ 9 ತಿಂಗಳ ಗರ್ಭಿಣಿಯಾಗಿದ್ದು, ಆರೋಪಿ ಮದುವೆಯಾಗಲು ನಿರಾಕರಿಸಿದ್ದಾನೆ.ಈ ಬಗ್ಗೆ ಯುವತಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹ ಪ್ರಕರಣ ದಾಖಲಿಸಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ಯುವಕ ತಲೆಮರೆಸಿಕೊಂಡಿದ್ದಾನೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.