LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಆ. 15ರಿಂದ ಸಂಪೂರ್ಣ ವಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸ ಲಾಗುತ್ತಿದೆ.

ರಾಜ್ಯ ಸರಕಾರದ ಅಧಿಸೂಚನೆಯಂತೆ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ಉತ್ಪಾದನೆ ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಕಡ್ಡಾಡಯವಾಗಿ ನಿಷೇಧಿಸಲಾಗುತ್ತಿದೆ.

ದೇವಸ್ಥಾನಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲ ರೀತಿಯ ಪ್ಲಾಸ್ಟಿಕ್ ಸಾಮಗ್ರಿಗಳು ಹಾಗೂ ದೇಗುಲದ ಪರಿಸರದ ಅಂಗಡಿಗಳಲ್ಲಿ, ವಾಣಿಜ್ಯ ಸಂಕೀರ್ಣಗಳಲ್ಲೂ ಏಕಬಳಕೆಯ ಪ್ಲಾಸ್ಟಿಕ್‌ಗಳ ಬಳಸುವಂತಿಲ್ಲ. ಬಳಕೆ ಕಂಡುಬಂದಲ್ಲಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾಯ್ದೆಗಳ ಪ್ರಕಾರ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ ಮತ್ತು ಇಒ ಅರವಿಂದ ಅಯ್ಯಪ್ಪ ಸುತಗುಂಡಿ ತಿಳಿಸಿದ್ದಾರೆ.



ಶ್ರೀ ದೇಗುಲದ ಅಧೀನದ ಎಲ್ಲ ಅಂಗಡಿ ಮಳಿಗೆಗಳಲ್ಲಿ ಹಾಗೂ ಆವರಣಗಳಲ್ಲಿ ಪ್ಲಾಸ್ಟಿಕ್‌ ಬಳಕೆಯನ್ನು ನಿಲ್ಲಿಸುವಂತೆ ನೊಟೀಸ್ ನೀಡಲಾಗಿದೆ. ಉಲ್ಲಂಘಿಸಿದಲ್ಲಿ ದಂಡ ವಿಧಿಸಲಾಗುವುದು. ಜತೆಗೆ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಎಚ್ಚರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪಂಚಾಯತ್ ವ್ಯಾಪ್ತಿಯ ಅಂಗಡಿಗಳಿಗೆ ಸೂಚನೆ ನೀಡಲು ಕ್ಷೇತ್ರದ 3 ಕಿ.ಮೀ. ವ್ಯಾಪ್ತಿಗೆ ಒಳಪಟ್ಟು ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕ್ರಮಕ್ಕಾಗಿ ಪತ್ರ ಬರೆಯಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026