Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪ್ರಧಾನಿ ಮೋದಿಯವರು ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ- ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೋದಿಯವರು ಪ್ರಧಾನಿ ಆದ ಬಳಿಕ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುವುದನ್ನು ರೂಢಿ ಮಾಡಿಕೊಂಡಿದ್ದು ಈ ಬಾರಿ ಸತತ ನಾಲ್ಕನೇ ದಿನ ಇಂಧನ ದರ ಏರಿಕೆ ಮಾಡಿ ದೇಶವನ್ನು ಹಾಗೂ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಅವರು ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ದರಗಳ ಏರಿಸಿದ್ದು, ದೇಶದ ಇತಿಹಾಸದಲ್ಲಿ ಹೀಗೆ ಏರಿಕೆಯಾಗಿದ್ದಿಲ್ಲ. ಜನಸಾಮಾನ್ಯರು, ಮದ್ಯಮ ವರ್ಗದ ಜನರ ಜೀವನ ದುಸ್ತರವಾಗಿದೆ. ಬೆಲೆಯೇರಿಕೆಯಿಂದ ಜನ ತತ್ತರಿಸಿದ್ದಾರೆ ಎಂದರು.

ಅಚ್ಛೇ ದಿನ್ಎಂದು ಜನರಿಗೆ ಟೋಪಿ ಹಾಕಲಾಗುತ್ತಿದೆ-
ಬಿಜೆಪಿ ಅಧಿಕಾರಕ್ಕೆ ಬಂದರೆ ಗುಜರಾತ್ ಮಾದರಿ ಸರ್ಕಾರ ಬರುತ್ತದೆ
, ಒಳ್ಳೆಯ ದಿನಗಳು ಬರುತ್ತವೆ ಎಂದು ಹೇಳಿ ಜನರಿಗೆ ಟೋಪಿ ಹಾಕಿದ್ದಾರೆ.  ಕಳೆದ 11 ದಿನಗಳಿಂದ 4 ಬಾರಿ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ದರ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 110 .93 ರೂ.ಗಳಾಗಿವೆ. ಡೀಸೆಲ್ ದರ 98.89 ರೂ.ಗಳಾಗಿವೆ.  7. 52 ರೂ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಪ್ರಧಾನಿ ಮೋದಿಯವರು ದೇಶವನ್ನು ಲೂಟಿ ಮಾಡುತ್ತಿರುವುದು ರುಜುವಾತಾಗುತ್ತಿದೆ ಎಂದರು.

ಕಚ್ಚಾತೈಲ  ದರ ಕಡಿಮೆಯಿದ್ದಾಗಿನ ಲಾಭ ಗ್ರಾಹಕರಿಗೆ ದೊರೆಯಲಿಲ್ಲ-ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 2014ರ ಮೇ ತಿಂಗಳಲ್ಲಿ 71.41 ರೂ. ಪೆಟ್ರೋಲ್ ಲೀ. ಒಂದಕ್ಕೆ ಬೆಲೆಯಿದ್ದರೆ, ಡೀಸೆಲ್ 56.71 ಪೈಸೆಯಿತ್ತು. ಅಂದು 412 ರೂ. ಆಗಿದ್ದ ಗ್ಯಾಸ್ ಸಿಲಿಂಡರ್ ಬೆಲೆ , ಇಂದು 915 ರೂ. ಆಗಿದೆ , ಇದು ದುಪ್ಪಟ್ಟಿಗಿಂತ ಹೆಚ್ಚಾಗಿದೆ.

ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಕಚ್ಚಾ ತೈಲದ ಬೆಲೆ ಹೋಲಿಸಿದರೆ ಪ್ರಸ್ತುತ ಬೆಲೆ ಇಳಿದಿದ್ದರೂ ಕೂಡ, ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚುತ್ತಿದೆ. 65 ರಿಂದ 75 ಡಾಲರ್  ಬೆಲೆ ಇದ್ದಾಗ, ಈ ಕಡಿಮೆ ಬೆಲೆಯ ಲಾಭ, ಗ್ರಾಹಕರಿಗೆ ದೊರೆಯಲಿಲ್ಲ.

ಪ್ರಸ್ತುತ ಕಚ್ಚಾ ತೈಲದ ಬೆಲೆ 100 ಡಾಲರ್ ಮಿತಿಯೊಳಗಿದ್ದರೂ, ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಸತತ ನಾಲ್ಕು ಬಾರಿ ಏರಿಕೆ ಮಾಡಿದೆ. ಇದರಿಂದಾಗಿ  ಗ್ರಾಹಕರಿಗೆ, ರೈತರಿಗೆ, ಜನಸಾಮಾನ್ಯರಿಗೆ ಈ ಬೆಲೆಏರಿಕೆಯ ಬಿಸಿ ತಟ್ಟಲಿದೆ. ಮೋದಿಯವರು ದೇಶವನ್ನು ಹಾಗೂ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ದಿನೇಶ್ ಗುಂಡೂರಾವ್, ಅಭಿಷೇಕ್ ದತ್ತಾ ಮೊದಲಾದವರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ  "108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ"ವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಶಾಸಕ ಸುರೇಶ್ ಕುಮಾರ್, ಪ್ರಿಯಕೃಷ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ