Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ

ಸುದ್ದಿಮೂಲ ವಾರ್ತೆ
ಬೆಂಗಳೂರು,ಏ.29: ಬೆಂಗಳೂರಿನ ಮಾಗಡಿ ರಸ್ತೆ ನೈಸ್ ಜಂಕ್ಷನ್‌ನಿಂದ ಆರಂಭವಾಗಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್‌ ಶೋ ನೋಡಲು ಜನಸಾಗರ ಸೇರಿದೆ.

ಬೆಳಗಾವಿಯ ಸಾಂಬ್ರಾ ಏರ್​ಪೋರ್ಟ್​ನಿಂದ ಹೊರಟು ಪ್ರಧಾನಿ ಮೋದಿ ಹೆಚ್​ಎಎಲ್​​ ಏರ್​ಪೋರ್ಟ್​ಗೆ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಹೆಚ್​ಎಎಲ್​ ಏರ್​ಪೋರ್ಟ್​ಗೆ ಬಂದಿಳಿದಿದ್ದಾರೆ. ಬಳಿಕ ಅಲ್ಲಿಂದ ಬಿಐಇಸಿ ಹೆಲಿಪ್ಯಾಡ್ ತಲುಪಿದ್ದಾರೆ. ಅಲ್ಲಿಂದ ಸುಮಾರು 5 ಕಿ.ಮೀ. ರೋಡ್‌ ಶೋ ನಡೆಯಲಿದೆ.

ಮಾಗಡಿ ರೋಡ್ ನೈಸ್ ರೋಡ್​ನಿಂದ ರೋಡ್ ಶೋ ಆರಂಭವಾಗಿ, ಸುಮನಹಳ್ಳಿ ಜಂಕ್ಷನ್​ನಲ್ಲಿ ಅಂತ್ಯವಾಗಲಿದೆ. ಈ ಹಿನ್ನೆಲೆ ಸುಮನಹಳ್ಳಿ ಜಂಕ್ಷನ್ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸುಮನಹಳ್ಳಿ ಜಂಕ್ಷನ್​ನಲ್ಲಿ ಎಲ್ಲಾ ರೋಡ್‌ಗಳನ್ನು ಬಂದ್‌ ಮಾಡಿದ್ದು, ಬ್ಯಾರಿಕೇಡ್​ ಹಾಕಿ ಪೊಲೀಸರನ್ನು ನಿಯೋಜನೆ ಮಾಡಿದ್ದಾರೆ.

ನೈಸ್ ರಸ್ತೆ ಜಂಕ್ಷನ್ ಬಳಿ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ಅಂಗಡಿ ಮುಂಗಟ್ಟುಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಮೋದಿ ರೋಡ್​ ಶೋ ವೀಕ್ಷಿಸಲು ಜನರು ಆಗಮಿಸುತ್ತಿದ್ದಾರೆ. ಸುರಕ್ಷಣೆಯ ಹಿನ್ನೆಲೆಯಿಂದ ಕಟ್ಟಡದ ಮೇಲ್ಭಾಗಕ್ಕೆ ಯಾರು ಹೋಗದಂತೆ ಎಚ್ಚರ ವಹಿಸಲಾಗಿದೆ.

ಪ್ರಧಾನಿ ಮೋದಿ ಅವರ ಆಗಮಕ್ಕಾಗಿ ಕಾಯುತ್ತಿರು ಸಾರ್ವಜನಿಕರು ಮತ್ತು ಬಿಜೆಪಿ ಕಾರ್ಯಕರ್ತರು ಬಿಜೆಪಿ ಶಾಲು ಹಿಡಿದು, ಬಿಜೆಪಿ ಬಾವುಟದೊಂದಿಗೆ ಸಾರ್ವಜನಿಕರು ಮತ್ತು ಬಿಜೆಪಿ ಅಭ್ಯರ್ಥಿಗಳು ಮೋದಿ ಆಗಮನಕ್ಕಾಗಿ ಕಾಯುತ್ತಿದ್ದಾರೆ.

ಪ್ರಧಾನಿ ಮೋದಿ ರೋಡ್​ ಶೋ ಹಿನ್ನೆಲೆ ಸಾಂಸ್ಕೃತಿಕ ಕಲಾತಂಡಗಳ ಆಯೋಜನೆ ಮಾಡಲಾಗಿದೆ. ಈಸ್ಟ್ ವೆಸ್ಟ್ ಜಂಕ್ಷನ್ ಬಳಿ ಡೊಳ್ಳು ಕುಣಿತ, ವೀರಗಾಸೆ ನೃತ್ಯ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ