LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪೋಕ್ಸೋ ಪ್ರಕರಣ: ಬಿಎಸ್‌ವೈಗೆ ಸಂಕಷ್ಟ- ಹೈಕೋರ್ಟ್‌ ಟ್ರಯಲ್‌ಗೆ ಅನುಮತಿ

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸಂಕಷ್ಟ ಎದುರಾಗಿದೆ. ಬಿಎಸ್‌ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಕೆಳ ನ್ಯಾಯಾಲಯ ಸಮನ್ಸ್ ಮಾಡಿರುವುದನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.

ಕೆಳ ಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಸಮನ್ಸ್‌ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್‌ ಯಡಿಯೂರಪ್ಪ ಅರ್ಜಿಯನ್ನು ವಜಾಗೊಳಿಸಿ ಟ್ರಯಲ್‌ಗೆ ಅನುಮತಿ ನೀಡಿದೆ.

ಬೆಂಗಳೂರಿನ ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಬಿಎಸ್‌ವೈ ಮೇಲಿದೆ. ಸಹಾಯ ಕೇಳಿ ಬಂದಾಗ ಯಡಿಯೂರಪ್ಪನವರು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾರ್ಚ್ 2024 ರಲ್ಲಿ ಬಾಲಕಿಯ ತಾಯಿ ದೂರು ನೀಡಿದ್ದರು.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಾಕ್ಷ್ಯ ನಾಶಪಡಿಸಿದ ಮತ್ತು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಆರೋಪಗಳ ಮೇಲೆ ಯಡಿಯೂರಪ್ಪ ಮತ್ತು ಅವರ ಮೂವರು ಸಹಾಯಕರ ವಿರುದ್ಧ ಜೂನ್ 2024 ರಲ್ಲಿ ಸಿಐಡಿ 750 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದೆ.

ಈ ಪ್ರಕರಣದಲ್ಲಿ ದೂರು ನೀಡಿದ್ದ ಬಾಲಕಿಯ ತಾಯಿ ಮತ್ತು ಆ ಬಾಲಕಿ ಇಬ್ಬರೂ ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಬಾಲಕಿಯ ತಾಯಿ ಮೇ 26, 2024 ರಂದು ನಿಧನರಾಗಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026