Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಾರ್ವಜನಿಕರಲ್ಲಿ ಪೊಲೀಸರ ಮನವಿ : ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಆರೋಪಿಗಳ ಬಂಧನ

ಬೆಳಗಾವಿ : ಶ್ರೀದೇವಿ ಕೂಗೆ ವೆಂಚರ್ ಪ್ರೈವೇಟ್ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾಗಿರುವ ಸಾರ್ವಜನಿಕರು ತಮ್ಮ ಹೂಡಿಕೆಗೆ ಸಂಬಂಧಿಸಿದ ದಾಖಲೆಗಳೊಂದಿಗೆ ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆಗೆ ಭೇಟಿ ನೀಡಿ ವಿಚಾರಣೆಗೆ ಸಹಕರಿಸುವಂತೆ ಪೊಲೀಸರು ಇದೀಗ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ

ಬಂಧನ : ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವಂಚನೆ ಎಸಗಿದ ಆರೋಪದಡಿ ಶ್ರೀದೇವಿ ಕೂಗೆ ವೆಂಚರ್ ಪ್ರೈವೇಟ್ ಸಂಸ್ಥೆಯ ಮುಖ್ಯ ಆರೋಪಿ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

   ಧಾರವಾಡದ ಕೇಶವನಗರ ನಿವಾಸಿ ಪ್ರವೀಣ್ ಚಂದ್ರಶೇಖರ ದೊಡ್ಡಮನಿ ಅವರು ನೀಡಿದ ದೂರಿನ ಮೇರೆಗೆ, ಜೂನ್ 16, 2026ರಂದು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರಿನ ಪ್ರಕಾರ, ಸುಭೋದ್ ಹೊನ್ನಪ್ಪ ಕೂಗೆ ಹಾಗೂ ಪ್ರಮೋದ್ ಫಕೀರಪ್ಪ ಹಳೆಮನಿ ಅವರು ಆರ್‌ಬಿಐ, ಸೆಬಿ ಹಾಗೂ ಸಂಬಂಧಿತ ಪ್ರಾಧಿಕಾರಗಳಿಂದ ಅಗತ್ಯ ಅನುಮತಿ ಪಡೆಯದೇ, ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಸಾರ್ವಜನಿಕರಿಂದ ಠೇವಣಿ ರೂಪದಲ್ಲಿ ಹಣ ಸಂಗ್ರಹಿಸಿ, ಬಳಿಕ ಹಣವನ್ನು ಹಿಂದಿರುಗಿಸದೆ ವಂಚಿಸಿದ್ದಾರೆ.

    ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 138/2026 ಅಡಿಯಲ್ಲಿ ಬಡ್ಸ್ ಕಾಯ್ದೆ-2019ರ ಕಲಂ 21(1), 21(2), 21(3), ಕೆಪಿಐಡಿ ಕಾಯ್ದೆ-2004ರ ಕಲಂ 9 ಹಾಗೂ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)-2023ರ ಕಲಂ 318(4) ಮತ್ತು 3(5)ರಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು ಪ್ರಕರಣದ ಎರಡನೇ ಆರೋಪಿ ಪ್ರಮೋದ್ ಫಕೀರಪ್ಪ ಹಳೆಮನಿ (49), ಸರ್ಕಾರಿ ನೌಕರ, ಸತ್ತಿ (ಅಥಣಿ ತಾಲೂಕು) ನಿವಾಸಿಯಾಗಿದ್ದು, ಅವರನ್ನು ಜೂನ್ 18ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

   ತನಿಖೆಯಲ್ಲಿ, ಆರೋಪಿಗಳು ಬೆಳಗಾವಿಯ ಶಿವಬಸವ ನಗರದಲ್ಲಿರುವ "ಶ್ರೀದೇವಿ ಕೂಗೆ ವೆಂಚರ್ ಪ್ರೈವೇಟ್" ಸಂಸ್ಥೆಯ ಹೆಸರಿನಲ್ಲಿ 2025ರಿಂದ 254 ಸಾರ್ವಜನಿಕರಿಂದ ಒಟ್ಟು ₹25.79 ಕೋಟಿ ಹೂಡಿಕೆ ರೂಪದಲ್ಲಿ ಸಂಗ್ರಹಿಸಿ, ಹಣವನ್ನು ಹಿಂದಿರುಗಿಸದೆ ವಂಚಿಸಿರುವುದು ಬೆಳಕಿಗೆ ಬಂದಿದೆ.

    ಪ್ರಕರಣದ ಪ್ರಮುಖ ಆರೋಪಿ ಸುಭೋದ್ ಹೊನ್ನಪ್ಪ ಕೂಗೆ (21), ಜಲಾಲಪುರ (ರಾಯಭಾಗ ತಾಲೂಕು) ಮೂಲದವರಾಗಿದ್ದು, ಪ್ರಸ್ತುತ ಬೆಳಗಾವಿಯ ಮಹಾಂತೇಶ ನಗರದಲ್ಲಿ ವಾಸವಾಗಿದ್ದಾರೆ. ಅವರನ್ನು ಜುಲೈ 13, 2026ರಂದು ಬಂಧಿಸಿ ಬೆಂಗಳೂರಿನ XCII ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ (CCH-93)ಕ್ಕೆ ಹಾಜರುಪಡಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದು ತನಿಖೆ ಮುಂದುವರಿಸಲಾಗಿದೆ.

.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ