Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಅಭ್ಯರ್ಥಿಗಳಿಗಾಗಿ ಅಂತಿಮ ಕಸರತ್ತಿನಲ್ಲಿ ರಾಜಕೀಯ ಪಕ್ಷಗಳು

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.12: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು, ಗುರುವಾರ (ಏ.13)ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಚುನಾವಣಾ ವೇಳಾಪಟ್ಟಿಯಂತೆ ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ. ನಾಳೆ ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ನಾಳೆಯಿಂದ ಏ.13 ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏ.20ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.

ನಾಮಪತ್ರಗಳನ್ನು ಸಲ್ಲಿಸಲು ಸಮಯವನ್ನು ನಿಗದಿಪಡಿಸಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16 ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.

ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿ ಪ್ರವೇಶಿಸಲು ಅವಕಾಶವಿದ್ದು, 100 ಮೀಟರ್ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿರುತ್ತದೆ.

ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್ 24 ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.

ರಾಜ್ಯದಲ್ಲಿ ಈಗಾಗಲೇ ಚುನಾವಣೆಗೆ ಅವಶ್ಯವಿರುವ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, 146 ವೆಚ್ಚ ನಿರ್ವಹಣಾ ವೀಕ್ಷಕರು, 120 ಸಾಮಾನ್ಯ ವೀಕ್ಷಕರು ಸೇರಿದಂತೆ 37 ಪೊಲೀಸ್ ವೀಕ್ಷಕರನ್ನು ನಿಯೋಜಿಸಲಾಗಿದೆ.

ಗುರುವಾರ ಅಧಿಕೃತ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುತ್ತಿದ್ದು, ಮತದಾನದ ಸಮಯ ಸೇರಿದಂತೆ ಇತರೆ ಪ್ರಮುಖ ವಿಷಯಗಳನ್ನು ಅಧಿಸೂಚನೆ ಒಳಗೊಂಡಿರುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಬಿಜೆಪಿ ಬಿ ಫಾರಂ ವಿತರಣೆ:

ಮತ್ತೊಂದೆಡೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲೂ ಸಹ ಚಟುವಟಿಕೆಗಳು ಬಿರುಸುಗೊಂಡಿವೆ. ಬಿಜೆಪಿಯಿಂದ ಈಗಾಗಲೇ 189 ಕ್ಷೇತ್ರಗಳಲ್ಲಿ ಟಿಕೆಟ್ ಹಂಚಿಕೆ ಮಾಡಲಾಗಿದ್ದು, ಬುಧವಾರ ಪಕ್ಷದ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು ಅಭ್ಯರ್ಥಿಗಳಿಗೆ ಬಿಫಾರಂಗಳನ್ನು ವಿತರಿಸಿದರು.

ಬಿಜೆಪಿಯ ಬಾಕಿ 35 ಕ್ಷೇತ್ರಗಳಿಗೆ ಗುರುವಾರವೇ ಟಿಕೆಟ್ ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನಿಂದ ಒಂದು ಬಾರಿ 124 ಮತ್ತು ಎರಡನೇ ಪಟ್ಟಿಯಲ್ಲಿ 42 ಸೇರಿ 166 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಕಿ 58 ಕ್ಷೇತ್ರಗಳಿಗೆ ಒಂದೆರಡು ದಿನಗಳಲ್ಲಿ ಅಂತಿಮ ಪಟ್ಟಿ ಬಿಡುಗಡೆ ಮಾಡುವ ಮುನ್ಸೂಚನೆ ನೀಡಿದೆ.

ಇನ್ನು ಜೆಡಿಎಸ್‌ನಿಂದ ಕೇವಲ 93 ಕ್ಷೇತ್ರಗಳಿಗೆ ಮಾತ್ರ ಕಳೆದ ಡಿಸೆಂಬರ್‌ನಲ್ಲಿಯೇ ಟಿಕೆಟ್ ಘೋಷಣೆಯಾಗಿದೆ. ಚುನಾವಣೆ ನಾಮಪತ್ರ ಸಲ್ಲಿಸುವ ದಿನಾಂಕ ಹತ್ತರ ಬಂದರೂ ಸಹ ತನ್ನ ಪಟ್ಟಿ ಬಿಡುಗಡೆ ಮಾಡದಿರುವುದು ಅಭ್ಯರ್ಥಿಗಳಲ್ಲಿ ಗೊಂದಲ ಮೂಡಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ