LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆಯಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ

ಬೆಂಗಳೂರು: ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ಇವರ ವ್ಯಾಪ್ತಿಯಲ್ಲಿ ಬರುವ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ನಾಳೆಯಿಂದ(ದಿನಾಂಕ: 13-04-2024) ಅಂಚೆ ಮತದಾನ ನಡೆಯಲಿದೆ.

ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ರವರ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ ಸೇರಿದಂತೆ 3 ಲೋಕಸಭಾ ಕ್ಷೇತ್ರಗಳಲ್ಲಿ ಬರುವ ಮತದಾರರ ಪಟ್ಟಿಯಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ(AVSC) ಹಾಗೂ ವಿಶೇಷ ಚೇತನರು(ಶೇ.40ಕ್ಕಿಂತ ಹೆಚ್ಚು ಅಂಗವಿಲತೆ ಉಳ್ಳವರು[ಮತದಾರರ ಪಟ್ಟಿಯಲ್ಲಿ ಗುರುತಿಸಿರುವ]-PWD) ಅಂಚೆ ಮತದಾನದ ಮೂಲಕ ಅವಕಾಶ ಕಲ್ಪಿಸಲಾಗಿದೆ.

ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 95,128 85 ವರ್ಷ ಮೇಲ್ಪಟ್ಟ ಹಾಗೂ 22,222 ವಿಶೇಷ ಚೇತನರನ್ನು ಗುರುತಿಸಲಾಗಿದೆ. ಈ ಪೈಕಿ 85 ವರ್ಷ ಮೇಲ್ಪಟ್ಟ 6206 ಮತದಾರರು ಹಾಗೂ ವಿಶೇಷ ಚೇತನರು 201 ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.

85 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದವರು ಹಾಗೂ ವಿಶೇಷ ಚೇತನರಿಗೆ ಏಪ್ರಿಲ್ 13 ರಿಂದ ಏಪ್ರಿಲ್ 18 ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವೀಡಿಯೋಗ್ರಾಫರ್ ಒಳಗೊಂಡಿರುವ ಮತಗಟ್ಟೆ ತಂಡವು ಮನೆಗೆ ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲಿಸಲಾಗುತ್ತದೆ. ಬಳಿಕ ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುತ್ತದೆ. ಈ ಎಲ್ಲಾ ಪ್ರಕ್ರಿಯೆಯನ್ನು ವೀಡಿಯೋಗ್ರಫಿ ಮೂಲಕ ಸೆರೆಯಿಡಿಯಲಾಗುತ್ತದೆ.

ಮತಗಟ್ಟೆ ಸಿಬ್ಬಂದಿಯು ಮತಪತ್ರ ಹಾಗೂ ಮತಪೆಟ್ಟಿಗೆಗಳೊಂದಿಗೆ ಪ್ರತೀ ಮತದಾರರ ಮನೆಗೆ ಎರಡು ಬಾರಿ ಭೇಟಿ ನೀಡುತ್ತಾರೆ. ಮುಂಚಿತವಾಗಿ ಮಾಹಿತಿ ನೀಡಿದ ಬಳಿಕವೇ ಮತಗಟ್ಟೆ ಸಿಬ್ಬಂದಿ ಭೇಟಿನೀಡುವರು. ಮೊದಲ ಬಾರಿ ಮತದಾರರು ಮನೆಯಲ್ಲಿರದಿದ್ದರೆ, ಎರಡನೇ ಬಾರಿ ಹೋಗುತ್ತಾರೆ. ಆ ಬಳಿಕ ಮತದಾನಕ್ಕೆ ಅವಕಾಶವಿರುವುದಿಲ್ಲ.

ಮನೆಯಿಂದ ಮತದಾನಕ್ಕೆ 12ಡಿ ನಮೂನೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವವರಿಗೆ ಮತಗಟ್ಟೆಗೆ ಬಂದು ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ಅವಕಾಶವಿರುವುದಿಲ್ಲ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭ