LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್ , ‘ಧಿಕ್ಕಾರ ಆಪರೇಷನ್ ಸಿಂದೂರ್’ ಎಂದು ಪೋಸ್ಟ್ ’

ಮಂಗಳೂರು: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ್ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಮಂಗಳೂರಿನ ಓರ್ವ ವಿದ್ಯಾರ್ಥಿನಿ ಇನ್ ಸ್ಟಾಗ್ರಾಂನಲ್ಲಿ ಹಾಕಿದ ಪೋಸ್ಟ್ ಭಾರಿ ವಿವಾದಕ್ಕೆ ಕಾರಣವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ರೇಷ್ಮಾ ಎನ್ ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹ್ಯಾಷ್ ಟ್ಯಾಗ್ “ದಿಕ್ಕಾರ ಆಪರೇಷನ್ ಸಿಂದೂರ್ ” ಎಂದು ಗುರುವಾರ (ಮೇ 08) ದಂದು ಪೋಸ್ಟ್ ಹಾಕಿದ್ದರು. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್ ಮಾಡಿದ್ದಾರೆ.

ರೇಷ್ಮಾ ಪ್ರಸ್ತುತ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಸ್ನಾತಕ್ಕೋತ್ತರ ಪದವಿ ವ್ಯಾಸಾಂಗ ಮಾಡುತ್ತಿದ್ದಾರೆ. “ನನ್ನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ, ಅಲ್ಲಿ ನಂದಿ ಹೋಯಿತು ಬೆಳಕು” “ಅವನ ಮನೆಯ ಬೆಳಕಿಗೆ ನನ್ನೊಳಗಿನ ದೀಪ… ಬೆಳಕಿನ ವಿಜೃಂಭಣೆಗಾಗಿ ಹೋರಾಟ ಜಯಿಸಿದು ಕತಲು… ಎಲ್ಲೆಲ್ಲೂ ಕತ್ತಲು…!”#dikkaraoperationsindura ಹ್ಯಾಷ್ ಟ್ಯಾಗ್ ನಡಿ ಪೋಸ್ಟ್ ಹಾಕಿದ್ದಾರೆ. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್ ಮಾಡಿದ್ದಾರೆ.

ಪೋಸ್ಟ್ ವೈರಲ್ ಆದ ಬೆನ್ನಲ್ಲೇ ರೇಷ್ಮಾ ತನ್ನನ್ನು ತಾನು ಸಮರ್ಥಿಸಿಕೊಂಡಿದ್ದಾರೆ. “ಭಾರತ ದೇಶದ ಮೇಲೆ ಅಪಾರ ಪ್ರೀತಿ ಇದೆ, ಗೌರವ ನನಗಿದೆ. ದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಯು ಸುಖ, ಶಾಂತಿ, ನೆಮ್ಮದಿ, ಸಮೃದ್ಧಿಯಿಂದ ಬದುಕಬೇಕು ಎಂಬುದು ನನ್ನ ಕಾಳಜಿ. ಈ ದೇಶದಲ್ಲಿ ಹುಟ್ಟಿರುವ ಬಗ್ಗೆ ಹೆಮ್ಮೆ ಇದೆ, ಏಕೆಂದರೆ ವೈವಿಧ್ಯತೆಯಲ್ಲಿ ಏಕತೆ ಇರುವ ದೇಶ ಭಾರತ. ಈ ದೇಶದ ಮಣ್ಣಿನ ಮಕ್ಕಳಾದ ನಾವು ದ್ವೇಷದ ಕಾರಣ, ಭಯೋತ್ಪಾದನೆಯ ಕಾರಣಕ್ಕಾಗಿ ಮಣ್ಣಾಗುವುದನ್ನು, ನೋವುಗಳನ್ನು ಅನುಭವಿಸುವುದು ನನಗಿಷ್ಟವಿಲ್ಲ.
ಯಾವುದೇ ಯುದ್ಧ ಆದಾಗ ಮಡಿಯುವವರು ಒಂದೆಡೆಯಾದರೆ ಆಯಾ ದೇಶದ ಬಹುತೇಕರು ವಿವಿಧ ಕಾರಣಗಳಿಗಾಗಿ ನೋವು ಅನುಭವಿಸುವಂತಾಗುತ್ತದೆ. ಭಾರತದ ಮೇಲೆ ಭಯೋತ್ಪಾದನೆಯ ಕರಿನೆರಳು ಬೀಳದಿರಲಿ, ಶಾಂತಿ, ಸೌಹಾರ್ದ ನೆಲೆಸಲಿ. ಭಯೋತ್ಪಾದನೆ ನಿರ್ಮೂಲನೆಯಾಗಲಿ. ಸಾವು ನೋವು ಇಲ್ಲದಾಗಲಿ ಎನ್ನುವುದಷ್ಟೇ ನನ್ನ ಉದ್ದೇಶ” ಎಂದು ರೇಷ್ಮಾ ಹೊಸದಾಗಿ ಪೋಸ್ಟ್ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉದ್ಘಾಟನೆಗೂ ಮುನ್ನವೇ ಕುಸಿದ 21 ಕೋಟಿ ವೆಚ್ಚದ ನೀರಿನ ಟ್ಯಾಂಕ್!ಐಎಎಸ್ ಸುಲೋಚನಾ ಮೀನಾ ಯಶಸ್ಸಿನ ಕಥನಕಲ್ಲೇಟಿಗಿಂತ ಕಣ್ಣೇಟು ಜೋರಂತೆ ಮನೆ ಕಟ್ಟಡಕ್ಕೆ ದೃಷ್ಟಿ, ಅದರ ಪರಿಹಾರಕ್ಕಾಗಿ ಕೆಲವೊಂದು ಇಲ್ಲಿ ಸೃಷ್ಟಿ.ಈ ಕಾರಣಕ್ಕೆ ಜ್ಞಾನಭಾರತಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎಸ್. ರವಿ ಅಮಾನತ್ತು.!ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ನಿಖರ ಹಾಗೂ ವಾಸ್ತವ ಅಂಕಿ ಅಂಶಗಳ ಕ್ರೋಢೀಕರಣ ಅಗತ್ಯನೀವುಗಳು ಯಾವ ಪಕ್ಷದಲ್ಲಿಯಾದರೂ ಇರಿ ಸಮಾಜಕ್ಕೆ ಧಕ್ಕೆ ಬಂದಾಗ ಮಾತ್ರ ಒಂದಾಗಿ: ಸಚಿವ ಕೆ.ಎಚ್.ಮುನಿಯಪ್ಪಸಮಾನತೆಗೆ ಪೂರಕವಾಗಿ ಗ್ಯಾರಂಟಿ ಯೋಜನೆಗಳು ಜಾರಿ:  ಶಾಸಕ ಟಿ.ರಘುಮೂರ್ತಿ..!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 21-01-2026.!ಇಂದಿನ ವಚನ: -ಹಡಪದ ಅಪ್ಪಣ್ಣ  ಅವರ ವಚನ..!ಫೆ. 1 ರಂದು ಹಿಂದೂ ಸಂಗಮ ಕಾರ್ಯಕ್ರಮ: ಅಧ್ಯಕ್ಷ ಅನಿತ್ ಕುಮಾರ್.!