E-PAPER
17 Nov 2026, 05:20:53 PM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಪ್ರವೇಶ ಮತ್ತು ಅಭಿಮುಖೀಕರಣ ಕಾರ್ಯಕ್ರಮ

ಬೆಳಗಾವಿ-16: ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯವು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾನೂನು ವೃತ್ತಿ ಹಾಗೂ ಈ ಕ್ಷೇತ್ರದಲ್ಲಿರುವ ವಿವಿಧ ಉದ್ಯೋಗಾವಕಾಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಒಂದು ದಿನದ ಪ್ರವೇಶ ಮತ್ತು ಅಭಿಮುಖೀಕರಣ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಗಿತ್ತು.

ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ರಾಜಕೀಯ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಕಾನೂನು ಪದವೀಧರರಿಗೆ ಕೆಳಹಂತದ ನ್ಯಾಯಾಲಯಗಳಿಂದ ಹಿಡಿದು ಸುಪ್ರೀಂ ಕೋರ್ಟ್‌ವರೆಗೆ ವಕೀಲ ವೃತ್ತಿ, ನ್ಯಾಯಾಂಗ ಸೇವೆ ಹಾಗೂ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಉದ್ಯೋಗ ಸೇರಿದಂತೆ ಹಲವಾರು ವೃತ್ತಿ ಅವಕಾಶಗಳಿವೆ ಎಂದು ತಿಳಿಸಿದರು.

ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ. ರತ್ನಾ ಆರ್. ಭರಮಗೌಡರ ಮಾತನಾಡಿ, ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಮಾತನಾಡುವ ಕೌಶಲವನ್ನು ಬೆಳೆಸಿಕೊಳ್ಳಬೇಕು. ಚರ್ಚಾ ಸ್ಪರ್ಧೆಗಳಲ್ಲಿ ಭಾಗವಹಿಸುವುದರೊಂದಿಗೆ ನಿರಂತರವಾಗಿ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಉನ್ನತ ಗುರಿಗಳನ್ನು ಹೊಂದಿ, ಅವುಗಳನ್ನು ಸಾಧಿಸುವ ನಿಟ್ಟಿನಲ್ಲಿ ಶ್ರಮಿಸುವಂತೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಆರ್. ಎಸ್. ಮುತಾಲಿಕ್ ಅವರು ಕರ್ನಾಟಕ ಲಾ ಸೊಸೈಟಿ ಹಾಗೂ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಸಾಧನೆಗಳು ಮತ್ತು ಕೊಡುಗೆಗಳನ್ನು ಸ್ಮರಿಸಿದರು.

ಈ ಸಂಸ್ಥೆಗಳು ಸಂಸತ್ತು, ನ್ಯಾಯಾಂಗ, ಕಾನೂನು ಕ್ಷೇತ್ರ ಹಾಗೂ ಸಮಾಜದ ವಿವಿಧ ರಂಗಗಳಿಗೆ ಮಹತ್ವದ ಕೊಡುಗೆಗಳನ್ನು ನೀಡಿವೆ ಎಂದು ಹೇಳಿದರು.

ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸೆ ಕೋಶದ (ಐಕ್ಯೂಎಸಿ)ಸಂಯೋಜಕ ಡಾ. ಪಿ. ಎ. ಯಜುರ್ವೇದಿ ಸ್ವಾಗತಿಸಿ, ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಾಧನೆಗಳನ್ನು ಪರಿಚಯಿಸಿದರು.

ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಆಯೋಜಿಸಿತ್ತು.

ಪ್ರೇಮಾ ಮತ್ತು ತಂಡದವರು ಪ್ರಾರ್ಥಿಸಿದರು. ಸಹಾಯಕ ಪ್ರಾಧ್ಯಾಪಕ ಸತೀಶ ಅನಿಖಿಂಡಿ ವಂದಿಸಿದರು. ಶ್ರಾವಣಿ ಹಳೇಮನಿ ಹಾಗೂ ರಮ್ಯಾ ನಿರೂಪಿಸಿದರು.

ಕಾರ್ಯಕ್ರಮದ ಬಳಿಕ ಪ್ರವೇಶ, ಅಭಿಮುಖೀಕರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎ. ಎಚ್. ಹವಾಲ್ದಾರ, ಬೋಧಕ ಸಿಬ್ಬಂದಿ, ಪ್ರಥಮ ವರ್ಷದ ವಿದ್ಯಾರ್ಥಿಗಳು ಹಾಗೂ  ಪಾಲಕರು ಹಾಜರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಪ್ರವೇಶ ಮತ್ತು ಅಭಿಮುಖೀಕರಣ ಕಾರ್ಯಕ್ರಮವೀರ ವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ - 2026ಮಂಡೋಳ್ಳಿಯಲ್ಲಿ ₹1.70 ಕೋಟಿ ವೆಚ್ಚದಲ್ಲಿ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ