E-PAPER
17 Nov 2026, 12:18:08 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜುಲೈ 22ಕ್ಕೆ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ಶಾಲೆ ಆರಂಭ

*ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವವಿಮಾ ಯೋಜನೆ ಕುರಿತು ಶೀಘ್ರ ನಿರ್ಧಾರ*

ಬೆಂಗಳೂರು-14:ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ, ಯು.ಕೆ.ಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು ಎಂದರು.

* *ಗವರ್ನಮೆಂಟ್ ಮಾಂಟೆಸ್ಸರಿ ಆರಂಭ*
ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುವೆ. ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ ಎಂದರು.

* *ಅಂಗನವಾಡಿ ಕೊಡುಗೆ ಅಪಾರ*
ಸಮಾಜಕ್ಕೆ ಅಂಗನವಾಡಿ ಕೊಡುಗೆ ಅಪಾರ. ಕಳೆದ 50 ವರ್ಷಗಳಿಂದ ಅಂಗನವಾಡಿ ಕೇಂದ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿವೆ. ಇನ್ಮುಂದೆ ಗವರ್ನಮೆಂಟ್ ಮಾಂಟೆಸ್ಸರಿ ಆಗಿ ಬದಲಾಗಲಿದ್ದು, ಇತರ ಶಾಲೆಗಳಿಗಿಂತ ನಮ್ಮ ಅಂಗನವಾಡಿ ಕೇಂದ್ರದ ಮಕ್ಕಳು ಹೆಚ್ಚು ಸುರಕ್ಷಿತವಾಗಿರುತ್ತವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

* *ಗುಣಮಟ್ಟದ ಶಿಕ್ಷಣ ನೀಡುವುದೇ ಗುರಿ*
ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಬಯಸುವುದು ಪ್ರತಿಯೊಬ್ಬ ಪಾಲಕರ ಕನಸಾಗಿರುತ್ತದೆ. ಗುಣಮಟ್ಟದ ಶಿಕ್ಷಣದ ಬಗ್ಗೆ ಶಿಕ್ಷಣ ಇಲಾಖೆ ಯೋಚಿಸುವುದು ತಪ್ಪಲ್ಲ. ಆದರೆ, ಅಂಗನವಾಡಿಗೆ ಪೆಟ್ಟು ಬೀಳಬಾರದು. ನಾವೇ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಮುಂದಾಗೋಣ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಇಂಥ ಶಿಬಿರಗಳನ್ನು ಆಯೋಜಿಸಿ, ಗುಣಮಟ್ಟಕ್ಕೆ ಆದ್ಯತೆ ನೀಡೋಣ ಎಂದರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

* *ಶೀಘ್ರವೇ ಇನ್ಸೂರೆನ್ಸ್ ತೀರ್ಮಾನ*
ಅಂಗನವಾಡಿ ಕಾರ್ಯಕರ್ತರಿಗೆ ಇನ್ಯುರೆನ್ಸ್ ನೀಡುವ ಕುರಿತು ಶೀಘ್ರವೇ ತೀರ್ಮಾನಿಸಲಾಗುವುದು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಲಾಗುವುದು. ಗೌರವ ಧನ ಹೆಚ್ಚಳದ ಬಗ್ಗೆಯೂ ಸಿಎಂ ಜೊತೆಗೆ ಚರ್ಚಿಸಿದ್ದು, ಶೀಘ್ರವೇ ಕಾರ್ಯರೂಪಕ್ಕೆ ತರುವ ಕೆಲಸ ಆಗಲಿದೆ ಎಂದು ಸಚಿವರು ತಿಳಿಸಿದರು.

* *ಹೆಣ್ಣಿಗೆ ಹೋರಾಟವೇ ಮನೋಬಲ*
ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೆ ಹೋರಾಟ ಮನೋಭಾವದಿಂದ ನಾನು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿರುವೆ. ಸಮಾಜದಲ್ಲಿ ಮಹಿಳೆಯರಿಗಿಂತ ಪುರುಷರಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ಗಂಡು ಮಕ್ಕಳಿಗೆ ಸಿಗುವ ಮರ್ಯಾದೆ ಹೆಣ್ಣುಮಕ್ಕಳಿಗೆ ಇರುವುದಿಲ್ಲ. ಇದು ಸಮಾಜದಲ್ಲಿ ಅಲ್ಲ, ಇದು ನಮ್ಮ ಮನೆಗಳಲ್ಲೇ ಅಧಿಕವಾಗಿದೆ. ಹೆಣ್ಣು ಮಕ್ಕಳು ಜೋರಾಗಿ ಮಾತಾಡಿದರೂ ಕಷ್ಟ. ಎಷ್ಟೋ ಕಷ್ಟಗಳನ್ನು ಮೆಟ್ಟಿನಿಂತು ಹೆಣ್ಣು ಸಮಾಜಕ್ಕೆ ಮಾದರಿಯಾಗಿ ಬದುಕುತ್ತಿದ್ದಾಳೆ ಎಂದರು.

ಸಮಾರಂಭದಲ್ಲಿ ಹಂಪಿ ಕನ್ನಡ ವಿ.ವಿಯ ನಿವೃತ್ತ ಪ್ರಾಧ್ಯಾಪಕರು ಹಾಗೂ ಅಂಕಣಕಾರರಾದ ಟಿ.ಆರ್.ಚಂದ್ರಶೇಖರ್, ಸಿ.ಐ.ಟಿ.ಯು ಕರ್ನಾಟಕ ಹಾಗೂ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಎಸ್. ವರಲಕ್ಷ್ಮೀ, ಕಾರ್ಯದರ್ಶಿ ಯಮುನಾ ಗಾಂವ್ಕರ್, ಕಾರ್ಯಾಧ್ಯಕ್ಷರಾದ ಶಾಂತ ಎನ್.ಘಂಟೆ, ಖಜಾಂಚಿ ಜಿ‌.ಕಮಲಾ, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದ ಸೇರಿದಂತೆ ರಾಜ್ಯಮಟ್ಟದ ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.