Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಡೆಂಗ್ಯೂ
, ಚಿಕೂನ್‍ಗುನ್ಯಾ ಹಾಗೂ ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಮಳೆಗಾಲದ ಅವಧಿಯಲ್ಲಿ ಹೆಚ್ಚಾಗಿ ಹರಡುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯ ಎಂದು ಬೆಳಗಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಮಹೇಶ್ ತಿಳಿಸಿದರು.

ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಕೂನಬೇವು ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಡೆಂಗ್ಯೂ ವಿರೋಧಿ ಮಾಸಾಚರಣೆ' ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಈಜಿಪ್ಟಿ ಸೊಳ್ಳೆಗಳಿಂದ ಡೆಂಗ್ಯೂ ಅಥವಾ ಮೂಳೆ ಮುರಿತ ಜ್ವರ ಹರಡುತ್ತದೆ. ರೋಗಬಾಧಿತರು ತೀವ್ರ ಜ್ವರದಿಂದ ಬಳಲುತ್ತಾರೆ. ಇದನ್ನು ತಡೆಗಟ್ಟಲು ನಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು ಹಾಗೂ ನೀರು ನಿಲ್ಲುವ ಮೂಲಗಳನ್ನು ಮುಚ್ಚುವುದು ಅತ್ಯಗತ್ಯ. ಮಳೆಗಾಲದ ಸಂದರ್ಭದಲ್ಲಿ ಇಂತಹ ರೋಗಗಳು ಅತಿ ವೇಗವಾಗಿ ಹರಡುತ್ತವೆ ಎಂದು ತಿಳಿಸಿದ ಅವರು, ಆಶಾ ಕಾರ್ಯಕರ್ತೆಯರು ಗ್ರಾಮದಲ್ಲಿ ಲಾರ್ವಾ ಸಮೀಕ್ಷೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕ ಎಸ್.ಹನುಮಂತಪ್ಪ ಮಾತನಾಡಿ, ರೋಗಗಳು ಬರುವ ಮೊದಲೇ ಜಾಗೃತಿ ವಹಿಸುವುದು ಜಾಣತನ. ಎಲ್ಲರೂ ತಮ್ಮ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಇಡೀ ಗ್ರಾಮದ ಜನರ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಶುಶ್ರೂಷಕಿ ಭಾರತಿ, ಆಶಾ ಕಾರ್ಯಕರ್ತೆಯರು ಹಾಗೂ ಶಾಲೆಯ ಸಹ ಶಿಕ್ಷಕರು ಉಪಸ್ಥಿತರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ