LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರೀ ಮಳೆ ಮುನ್ಸೂಚನೆ: ಪ್ರಾಣಹಾನಿ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ .!

 

ದಾವಣಗೆರೆ: ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಯಾವುದೇ ರೀತಿಯ ಪ್ರಾಣಾಪಾಯ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಂದು ಮಳೆಯಿಂದಾಗಬಹುದಾದ ಅನಾಹುತಗಳ ತಡೆಗಟ್ಟುವಿಕೆ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಏರ್ಪಸಿದ್ದ ʼಗೂಗಲ್‌ ಮೀಟ್‌' ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆ ಹಾಗೂ ಗಾಳಿಯಿಂದಾಗಿ ರಸ್ತೆ ಬದಿಯ ಮರಗಳು ಧರೆಗುರುಳುವ ಮತ್ತು ವಿದ್ಯುತ್ ತಂತಿಗಳು ತುಂಡಾಗಿ ಬೀಳುವ ಸಾಧ್ಯತೆ ಹೆಚ್ಚಿರುತ್ತದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಲೋಕೋಪಯೋಗಿ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಬೆಸ್ಕಾಂ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಸನ್ನದ್ಧರಾಗಿರಬೇಕು. ತುರ್ತು ತಂಡಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ಬೃಹತ್ ಕಾಂಪೌಂಡ್ ಗೋಡೆಗಳ ಸುರಕ್ಷತೆಯನ್ನು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಅಪಾಯಕಾರಿ ಸ್ಥಿತಿಯಲ್ಲಿರುವ ಗೋಡೆಗಳ ಬಗ್ಗೆ ಸಂಬಂಧಪಟ್ಟವರಿಗೆ ಮುನ್ನೆಚ್ಚರಿಕೆ ನೀಡಬೇಕು. ಅಲ್ಲದೆ, ಜಿಲ್ಲೆಯಲ್ಲಿರುವ ಶಿಥಿಲಾವಸ್ಥೆಯ ಕಟ್ಟಡಗಳನ್ನು ಗುರುತಿಸಿ, ಅಲ್ಲಿ ವಾಸಿಸುತ್ತಿರುವ ಜನರನ್ನು ತಕ್ಷಣವೇ ತೆರವುಗೊಳಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಮಳೆ ನೀರು ಸರಾಗವಾಗಿ ಹರಿಯಲು ಅಡ್ಡಿಯಾಗಿರುವ ಚರಂಡಿಗಳನ್ನು ತಕ್ಷಣವೇ ಸ್ವಚ್ಛಗೊಳಿಸಬೇಕು. ಎಲ್ಲಿಯೂ ನೀರು ನಿಂತು ಕೃತಕ ಪ್ರವಾಹ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರ ದೂರು ಹಾಗೂ ತುರ್ತು ನೆರವಿಗಾಗಿ ಎಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಿ, ಅವುಗಳ ದೂರವಾಣಿ ಸಂಖ್ಯೆಗಳನ್ನು ಸಾರ್ವಜನಿಕರಿಗೆ ತಿಳಿಯುವಂತೆ ಪ್ರಕಟಿಸಬೇಕು ಎಂದರು.

ಸಿಡಿಲು ಹಾಗೂ ಮಳೆಯಿಂದ ಉಂಟಾಗಬಹುದಾದ ತುರ್ತು ಚಿಕಿತ್ಸೆಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳನ್ನು ದಾಸ್ತಾನು ಇರಿಸಿಕೊಳ್ಳಬೇಕು. ಸಿಡಿಲು ಬಡಿಯುವ ಮುನ್ಸೂಚನೆ ನೀಡುವ 'ದಾಮಿನಿ' ಆಪ್ ಅನ್ನು ಪ್ರತಿಯೊಬ್ಬ ಸಾರ್ವಜನಿಕರು ಹಾಗೂ ಅಧಿಕಾರಿಗಳು ಅಳವಡಿಸಿಕೊಳ್ಳುವ ಮೂಲಕ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಮನವಿ ಮಾಡಿದರು.

ವಿಪತ್ತು ನಿರ್ವಹಣಾ ತಂಡ, ಲೋಕೋಪಯೋಗಿ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಆರೋಗ್ಯ ಇಲಾಖೆ, ಬೆಸ್ಕಾಂ, ಅಗ್ನಿಶಾಮಕದಳ ಅಧಿಕಾರಿಗಳು ಸನ್ನದ್ಧರಾಗಿದ್ದು, ತಮ್ಮ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಪರಿಸ್ಥಿತಿಯನ್ನು ಅವಲೋಕಿಸಬೇಕು. ವಿಪತ್ತು ನಿರ್ವಹಣಾ ಕಾರ್ಯದಲ್ಲಿ ಯಾವುದೇ ವಿಳಂಬ ಅಥವಾ ನಿರ್ಲಕ್ಷ ತೋರಬಾರದು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026