Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಜೈಲಿನಲ್ಲೇ ಪ್ರೇಮಲೀಲೆ: ಪತ್ನಿಯ ಜೊತೆ ವೀಡಿಯೋ ಕಾಲ್‌ನಲ್ಲಿ ಕೈದಿ ರೊಮ್ಯಾನ್ಸ್

ಬೆಂಗಳೂರು, ಮೇ 01: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹನಲ್ಲಿ ಕೈದಿಗಳ ಐಷಾರಾಮಿ ಬದುಕು, ಅಕ್ರಮ ಚಟುವಟಿಕೆಗಳು ಹಾಗೂ ಭದ್ರತಾ ಲೋಪಗಳ ಕುರಿತ ಸುದ್ದಿಗಳು ಮತ್ತೆ ತಲೆದೋರಿವೆ. ಕಟ್ಟುನಿಟ್ಟಿನ ನಿಯಮಗಳು ಜಾರಿಯಲ್ಲಿದ್ದರೂ, ಕೆಲ ಕೈದಿಗಳು ಮನಸೋಇಚ್ಛೆ ಜೀವನ ನಡೆಸುತ್ತಿರುವುದು ಬಹಿರಂಗವಾಗುತ್ತಲೇ ಇದೆ. ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಿಸುವುದು, ಗಾಂಜಾ–ತಂಬಾಕು ಬಳಕೆ, ಸಿಮ್ ಕಾರ್ಡ್ ಸಾಗಾಟ—ಇವೆಲ್ಲವೂ ಈಗ ಸಾಮಾನ್ಯ ಘಟನೆಗಳಂತೆ ಕಾಣಿಸುತ್ತಿವೆ. ಇತ್ತೀಚಿನ ಘಟನೆಯಲ್ಲಿ ವಿಚಾರಣಾಧೀನ ಖೈದಿ ಅಕ್ಬರ್ ಜೈಲಿನೊಳಗೇ ಪತ್ನಿಯೊಂದಿಗೆ ವೀಡಿಯೋ ಕಾಲ್ ನಡೆಸಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಘಟನೆ ಕೇವಲ ಒಂದು ವಿಡಿಯೋ ವಿವಾದವಲ್ಲ; ಇದು ಜೈಲಿನ ಭದ್ರತಾ ವ್ಯವಸ್ಥೆಯ ಮೇಲಿನ ಗಂಭೀರ ಪ್ರಶ್ನೆ. ಇನ್‌ಸ್ಟಾಗ್ರಾಮ್ ಮೂಲಕ ಹೊರಬಂದ ಈ ವಿಡಿಯೋ, ಒಳಗಿನ ನಿಯಂತ್ರಣ ವ್ಯವಸ್ಥೆ ಎಷ್ಟು ದುರ್ಬಲವಾಗಿದೆ ಎಂಬುದನ್ನು ಸ್ಪಷ್ಟಪಡಿಸಿದೆ. ಮೊಬೈಲ್‌ಗಳು, ಸಿಮ್ ಕಾರ್ಡ್‌ಗಳು ನಿರಂತರವಾಗಿ ಪತ್ತೆಯಾಗುತ್ತಿದ್ದರೂ, ಅಕ್ರಮ ಚಟುವಟಿಕೆಗಳು ನಿಲ್ಲದಿರುವುದು ಆತಂಕಕಾರಿ ಸಂಗತಿ. ಹಿಂದಿನ ಪ್ರಕರಣಗಳಲ್ಲಿ ಅಧಿಕಾರಿಗಳ ಅಮಾನತು, ದಾಳಿಗಳು, ವಶಪಡಿಸಿಕೊಳ್ಳುವ ಕ್ರಮಗಳು ನಡೆದಿದ್ದರೂ, ಪರಿಸ್ಥಿತಿಯಲ್ಲಿ ಮೂಲಭೂತ ಬದಲಾವಣೆ ಕಾಣಿಸುತ್ತಿಲ್ಲ. ಈಗಿನ ಘಟನೆಯೊಂದಿಗೆ, ಜೈಲು ಆಡಳಿತ ಕೇವಲ ಕ್ರಮಗಳನ್ನು ಘೋಷಿಸುವುದಲ್ಲ, ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಬೇಕೆಂಬ ಒತ್ತಾಯ ಮತ್ತೆ ಗಟ್ಟಿಯಾಗಿ ಕೇಳಿಬರುತ್ತಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ