LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

KSRTC ಗೆ ಪ್ರತಿಷ್ಠಿತ ' world HRd ಕಾಂಗ್ರೆಸ್ ಪ್ರಶಸ್ತಿ-2026' ಗರಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‍ಆರ್‍ಟಿಸಿ) ತನ್ನ ಅತ್ಯುತ್ತಮ ತರಬೇತಿ ಮತ್ತು ಸಾಂಸ್ಥಿಕ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಪ್ರತಿಷ್ಠಿತ 'ವಲ್ರ್ಡ್ ಎಚ್‍ಆರ್‍ಡಿ ಕಾಂಗ್ರೆಸ್ ಪ್ರಶಸ್ತಿ-2026' (Best in Training and Organisation Development) ಗೆ ಭಾಜನವಾಗಿದೆ.

2026 ನೇ ಮಾರ್ಚ್ 31 ರಂದು ಕೊಚ್ಚಿನ್‍ನಲ್ಲಿ ನಡೆದ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಯಿತು.
ನಿಗಮದ ಅಭಿವೃದ್ಧಿಯಲ್ಲಿ ತರಬೇತಿ ಕಾರ್ಯಕ್ರಮಗಳ ಪರಿಣಾಮಕಾರಿ ಪಾತ್ರವನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಳೆದ ಆರು ತಿಂಗಳಲ್ಲಿ ನಿಗಮದ 5 ತರಬೇತಿ ಕೇಂದ್ರಗಳ ಮೂಲಕ 12,000ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ವಿವಿಧ ಮಾದರಿಯ ತರಬೇತಿ ನೀಡಲಾಗಿದೆ. ಇಂಧನ ಕ್ಷಮತೆ, ಅಪಘಾತ ರಹಿತ ಚಾಲನೆ, ರಸ್ತೆ ಸುರಕ್ಷತೆ, ಸಿಮ್ಯುಲೇಟರ್ ತರಬೇತಿ ಹಾಗೂ ಆಡಳಿತ ಮಂಡಳಿ ಸಿಬ್ಬಂದಿಗಳಿಗೆ ಪುನಃಶ್ಚೇತನ ತರಬೇತಿಗಳನ್ನು ಆಯೋಜಿಸಲಾಗಿತ್ತು.

ಪ್ರಧಾನಮಂತ್ರಿ ಅನುಸೂಚಿತ ಜಾತಿ ಅಭ್ಯುದಯ ಯೋಜನೆಯಡಿ ಸಾರಿಗೆ ಇಲಾಖೆಯ ಸಹಯೋಗದೊಂದಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ಭಾರಿ ವಾಹನ ಚಾಲನಾ ತರಬೇತಿ ಮತ್ತು ಲೈಸೆನ್ಸ್ ವಿತರಣೆ, ಅಲ್ಪಸಂಖ್ಯಾತ ನಿರ್ದೇಶನಾಲಯದ ಸಹಯೋಗದಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತಿದೆ. ಹೊಸದಾಗಿ ನೇಮಕಗೊಂಡ ಚಾಲಕ-ಕಂ-ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ, ಕೆಎಸ್‍ಆರ್‍ಟಿಸಿ ಪೇದೆಗಳು ಮತ್ತು ಕಿರಿಯ ಸಹಾಯಕರಿಗೆ ವೃತ್ತಿ ಪರಿಚಯ ಹಾಗೂ ಜವಾಬ್ದಾರಿಗಳ ಬಗ್ಗೆ ವಿಶೇಷ ತರಬೇತಿ ಸೇರಿದಂತೆ ನಿಗಮದಲ್ಲಿನ ಪರಿಣಾಮಕಾರಿ ತರಬೇತಿ ಸೂಚ್ಯಂಕವನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕೊಚ್ಚಿನ್‍ನಲ್ಲಿ ನಡೆದ ಸಮಾರಂಭದಲ್ಲಿ ಕಾಲೇಜ್ ಆಫ್ ಶಿಪ್ ಟೆಕ್ನಾಲಜಿಯ ನಿರ್ದೇಶಕರಾದ ಕ್ಯಾಪ್ಟನ್ ಎಸ್.ಟಿ. ಶ್ರೀಧರನ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ನಿಗಮದ ಪರವಾಗಿ ಮಂಡಳಿ ಕಾರ್ಯದರ್ಶಿ ಹಾಗೂ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ. ಎಸ್. ಮತ್ತು ಹಾಸನದ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಶ್ರೀಮತಿ ಎ. ಎಸ್. ಗೀತಾಂಜಲಿ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ