Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆರ್ ಎಸ್ ಎಸ್ ಶತಮಾನೋತ್ಸವ: ಭಾರತ ಮಾತೆ ಚಿತ್ರದ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ₹100 ಮುಖಬೆಲೆಯ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ.

ದೆಹಲಿಯ ಡಾ. ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಿದ್ದರು. ಇದೇ ವೇಳೆ ಮಾತನಾಡಿದ ಅವರು, 'ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರವನ್ನು ನಾಣ್ಯದ ಮೇಲೆ ಮುದ್ರಿಸಲಾಗಿದೆ. ಇದು ಬಹಳ ಹೆಮ್ಮೆ ಮತ್ತು ಐತಿಹಾಸಿಕ ಮಹತ್ವವನ್ನು ಸೂಚಿಸುತ್ತದೆ' ಎಂದು ಹೇಳಿದ್ದಾರೆ.

₹100 ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನವನ್ನು ಮತ್ತು ಇನ್ನೊಂದು ಬದಿಯಲ್ಲಿ 'ವರದ ಮುದ್ರೆ'ಯಲ್ಲಿ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ ಮತ್ತು ಸ್ವಯಂಸೇವಕರು ಆಕೆಯ ಮುಂದೆ ಸಮರ್ಪಣಾ ಭಾವದಿಂದ ನಮಸ್ಕರಿಸುವ ಚಿತ್ರ ಮುದ್ರಿಸಲಾಗಿದೆ. ಅದರೊಂದಿಗೆ ಹಿಂದಿ ಹಾಗೂ ಇಂಗ್ಲೀಷ್‌ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ 100 ವರ್ಷ ಎಂದು ಬರೆಯಲಾಗಿದೆ.

ನಾಣ್ಯದ ಮೇಲೆ ಆರ್‌ಎಸ್‌ಎಸ್ ಧೈಯ ವಾಕ್ಯವನ್ನು ಸಹ ಮುದ್ರಿಸಲಾಗಿದ್ದು, 'ಎಲ್ಲವೂ ರಾಷ್ಟ್ರಕ್ಕೆ ಸಮರ್ಪಿತವಾಗಿದೆ. ಎಲ್ಲವೂ ರಾಷ್ಟ್ರದ್ದು, ಯಾವುದೂ ನನ್ನದಲ್ಲ..' ಎಂಬುದು ಇದರ ಅರ್ಥ.

1963ರ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಆರ್‌ಎಸ್‌ಎಸ್‌ ಸ್ವಯಂಸೇವಕರು ಭಾಗವಹಿಸಿದ್ದನ್ನು ಅಂಚೆ ಚೀಟಿಯಲ್ಲಿ ಚಿತ್ರಿಸಲಾಗಿದೆ. ಇದು ಸಂಘದ ಐತಿಹಾಸಿಕ ಕೊಡುಗೆಗಳನ್ನು ಒತ್ತಿಹೇಳುತ್ತದೆ. ಜತೆಗೆ, ಭಾರತ ಮಾತೆಗೆ, ಆರ್‌ಎಸ್‌ಎಸ್‌ನ ಶತಮಾನಗಳಷ್ಟು ಹಳೆಯ ಸೇವೆ ಮತ್ತು ಸಮರ್ಪಣಾ ಪ್ರಯಾಣಕ್ಕೆ ಹೆಮ್ಮೆಯ ಗೌರವ ಎಂದು ಮೋದಿ ಹೇಳಿದ್ದಾರೆ.

ಸಮಾರಂಭದಲ್ಲಿ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ