LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೆಹರು ವಿರುದ್ಧ ವಾಗ್ದಾಳಿ: ಪ್ರಧಾನಿ ಮೋದಿ, ಅಮಿತ್ ಶಾ OCD ಕಾಯಿಲೆಯಿಂದ ಬಳಲುತ್ತಿದ್ದಾರೆ-ಕಾಂಗ್ರೆಸ್ ಟೀಕೆ

ನವದೆಹಲಿ: ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ ಚರ್ಚೆ ವೇಳೆ ಮಾಜಿ ಪ್ರಧಾನಮಂತ್ರಿ ಜವಾಹಲ್ ಲಾಲ್ ನೆಹರು ಅವರನ್ನು ಟೀಕಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ತೀವ್ರವಾಗಿ ವಾಗ್ದಾಳಿ ನಡೆಸಿದೆ.

ನಿನ್ನೆ ಲೋಕಸಭೆಯಲ್ಲಿ ಜವಾಹರಲಾಲ್ ನೆಹರು ಕುರಿತು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಬ್ಬರೂ ಮಾತನಾಡಿದ್ದನ್ನು ನೋಡಿದರೆ, ಅವರು ವೈದ್ಯಕೀಯ ಭಾಷೆಯಲ್ಲಿ ಕರೆಯುವ ಒಸಿಡಿ (ಒಬ್ಸೆಸಿವ್-ಕಂಪಲ್ಸಿವ್ ಡಿಸಾರ್ಡರ್) ಎಂಬ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆಂಬುದನ್ನು ತೋರಿಸುತ್ತಿದೆ.

ರಾಜ್ಯಸಭೆಯಲ್ಲಿಯೂ ಇದು ಪುನರಾವರ್ತನೆಯಾಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ವಾಗ್ದಾಳಿ ನಡೆಸಿದ್ದಾರೆ.

ಇಂದಿನ ವೈಫಲ್ಯಗಳಿಗೆ ಅವರ ಬಳಿ ಉತ್ತರವಿಲ್ಲ, ಹೀಗಾಗಿ, ದಿಕ್ಕು ತಪ್ಪಿಸುವ, ಗಮನ ಬೇರೆಡೆ ಸೆಳೆಯುವ ಹಾಗೂ ಮಾನಹಾನಿ ಮಾಡುವ ಕೆಲಸ ಮಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ.

ಗೃಹಸಚಿವ ಅಮಿತ್ ಶಾ ತಾವೊಬ್ಬ ಇತಿಹಾಸಕಾರ ಎಂದು ತೋರಿಸಿಕೊಳ್ಳುತ್ತಿದ್ದಾರೆ. ಆದರೆ, ಅವರು ಭಾರತದ 2ನೇ ವಿಕೃತ ಇತಿಹಾಸಕಾರ. ಇದು ಎಂಟೈರ್ ಪೊಲಿಟಿಕಲ್ ಸೈನ್ಸ್​ನಲ್ಲಿ ಪದವಿ ಪಡೆದ ವ್ಯಕ್ತಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ್ ಕುರಿತಾದ ಚರ್ಚೆಯಲ್ಲಿ ನಿನ್ನೆ ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಜವಾಹರಲಾಲ್ ನೆಹರು ನೇತೃತ್ವದ ಕಾಂಗ್ರೆಸ್ ಸರ್ಕಾರ ಅಕ್ಸಾಯ್ ಚಿನ್‌ನ 38,000 ಕಿ.ಮೀ.ಗೂ ಹೆಚ್ಚು ಪ್ರದೇಶವನ್ನು ಕಳೆದುಕೊಂಡಿತು. ಪಾಕ್​ ಜೊತೆ ಸಿಂಧೂ ನದಿ ನೀರು ಒಪ್ಪಂದಕ್ಕೆ ಸಹಿ ಹಾಕಿ ದೊಡ್ಡ ತಪ್ಪು ಮಾಡಿದ್ದರು ಎಂದು ಟೀಕಿಸಿದ್ದರು.

ಪಿಒಕೆಯನ್ನು ಇನ್ನೂ ಯಾಕೆ ವಾಪಸ್ ಪಡೆದಿಲ್ಲ ಎಂದು ಕೇಳುವ ಮೊದಲು ಕಾಂಗ್ರೆಸ್ ಮೊದಲು ಅದನ್ನು ಯಾಕೆ ಬಿಟ್ಟು ಕೊಟ್ಟಿತ್ತು. ನೆಹರೂ ಅವರಿಂದ ಹಿಡಿದು ಎಲ್ಲಾ ಕಾಂಗ್ರೆಸ್ ಸರ್ಕಾರಗಳು ಮಾಡಿದ ತಪ್ಪುಗಳ ನೋವನ್ನು ಭಾರತ ಇನ್ನೂ ಅನುಭವಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು

ಇದೇ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಅಮಿತ್ ಶಾ ಅವರು, ನೆಹರೂ ಅವರನ್ನು ತೀವ್ರವಾಗಿ ಟೀಕಿಸಿದರು.1948ರಲ್ಲಿ ನಮ್ಮ ಸಶಸ್ತ್ರ ಪಡೆಗಳು ನಿರ್ಣಾಯಕ ಹಂತದಲ್ಲಿದ್ದವು. ಸರ್ದಾರ ಪಟೇಲ್ ಬೇಡ ಅಂದ್ರು ನೆಹರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಕದನ ವಿರಾಮ ಘೋಷಿಸಿದ್ದರು. ಪಾಕ್ ಆಕ್ರಮಿತ ಕಾಶ್ಮೀರ ಇಂದು ಅಸ್ತಿತ್ವದಲ್ಲಿದೆ ಎಂದರೆ ಅದು ನೆಹರು ಘೋಷಿಸಿದ ಈ ಏಕಪಕ್ಷೀಯ ಕದನ ವಿರಾಮದಿಂದಾಗಿ. ಪಿಓಕೆ ಸೃಷ್ಟಿಗೆ ಜವಾಹರಲಾಲ್ ನೆಹರು ಅವರೇ ಕಾರಣ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026