LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ - ಪ್ರಧಾನಿ ಮೋದಿ ಸಂತಾಪ

ನವದೆಹಲಿ : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಇದರಿಂದ ಮೃತರಾದ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಮೌನಿ ಅಮಾವಾಸ್ಯೆಯಂದು ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಭಕ್ತರು ಭರದಿಂದ ಹರಿದು ಬಂದಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ, 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪ್ರಧಾನಿ ಮೋದಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ ಮತ್ತು ಕೇಂದ್ರದಿಂದ ಅಗತ್ಯವಾದ ಎಲ್ಲ ಸಹಾಯವನ್ನು ನೀಡಲು ಭರವಸೆ ನೀಡಿದ್ದಾರೆ.

ಇದರ ಕುರಿತು ಟ್ವೀಟ್‌ ಮಾಡಿದ ಮೋದಿ, “ಪ್ರಯಾಗ್‌ರಾಜ್ ಮಹಾ ಕುಂಭದಲ್ಲಿ ಸಂಭವಿಸಿದ ಕಾಲ್ತುಳಿತ ಅತ್ಯಂತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಎಲ್ಲ ಗಾಯಾಳುಗಳು ಶೀಘ್ರದಲ್ಲಿ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಅಗತ್ಯ ಸಹಾಯವನ್ನು ಒದಗಿಸಲು ಶ್ರಮಿಸುತ್ತಿದೆ. ನಾನು ಮುಖ್ಯಮಂತ್ರಿ ಯೋಗಿ ಜಿ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ರಾಜ್ಯ ಸರ್ಕಾರದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ.” ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಚಲನಚಿತ್ರಗಳ ಬಿಡುಗಡೆಗೆ ಶೀಘ್ರದಲ್ಲಿ ಓಟಿಟಿ ಪ್ರಾರಂಭ :ಮೆಹಬೂಬ್ ಪಾಷಾನ.08 ರಂದು ಕನಕ ಜಯಂತಿ, ಕನಕಶ್ರೀ ಸೇವಾರತ್ನ ಪ್ರಶಸ್ತಿ, ಸಮಾಜದ ಸಾಧಕರಿಗೆ ಸನ್ಮಾನ ಬಿ.ಟಿ.ಜಗದೀಶ್.!ತಲೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಯುವಂತೆ ಮಾಡಲು ಸಾಧ್ಯವಿಲ್ಲ : ಅಣ್ಣಾಮಲೈಮಚ್ಚಿನಿಂದ ಕೊಚ್ಚಿ ಒಂದೇ ಕುಟುಂಬದ ಮೂವರನ್ನು ಕೊಂದು ವ್ಯಕ್ತಿ ಆತ್ಮಹತ್ಯೆವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆಐಎಎಸ್ ಕೋಮಲ್ ಪುನಿಯಾ ಯಶಸ್ಸಿನ ಕಥನಅಂದುಕೊಂಡಂತೆ ಕೆಲಸ ಕಾರ್ಯಗಳು ಕ್ಷಣಾರ್ಧದಲ್ಲಿಯೇ ನೆರವೇರಬೇಕೆಂದರೆ ಈ ಒಂದೇ ಒಂದು ಬಲಿಷ್ಠ ತಾಂತ್ರಿಕ ಬೇರನ್ನು ನಿಮ್ಮ ಹತ್ತಿರ ಇಟ್ಟುಕೊಂಡು ನೋಡಿ ಸಾಕು!ಬಟ್ಟೆ ಒಗೆಯಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳು ನೀರುಪಾಲು.!ಹಿರಿಯ ನಾಗರೀಕರಿಗೆ ಸಿಹಿ ಸುದ್ದಿ.!ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ.!