LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಡುಪಿಯಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ

ಉಡುಪಿ :ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸಚಿವ ದಿನೇಶ್ ಗುಂಡೂರಾವ್ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಆದಿ ಉಡುಪಿಯಿಂದ ಪ್ರಧಾನಿ ಮೋದಿ ರೋಡ್ ಶೋ ಆರಂಭವಾಗಿದ್ದು, ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ರೋಡ್ ಶೋ ನಡೆದಿದೆ.

ರಸ್ತೆಯ ಇಕ್ಕೆಲಗಳಲ್ಲಿ ನೆರೆದಿರುವ ಜನರು ಮೋದಿ ಮೋದಿ ಎಂದು ಜಯಘೋಷಗಳನ್ನು ಕೂಗಿ ಪ್ರಧಾನಿ ಮೇಲೆ ಹೂಮಳೆಗರೆದು ಸ್ವಾಗತಿಸಿದ್ದಾರೆ.  ದೇವರ ದರ್ಶನ ಪಡೆದ ನಂತರ ಅವರು ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಿದ್ದಾರೆ.ಬಳಿಕ  ಸಭಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಜೈ ಶ್ರೀ ಕೃಷ್ಣ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿ ಜನರನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.

ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿ ಶ್ರೀ ಕೃಷ್ಣನ ದರ್ಶನ ಪಡೆದಿದ್ದಾರೆ. ನಂತರ ಸ್ವರ್ಣ ಲೇಪಿತ ಕನಕನ ಕಿಂಡಿ ಲೋಕಾರ್ಪಣೆಗೊಳಿಸಿದ್ದಾರೆ. ಬರೋಬ್ಬರಿ 2 ಕೋಟಿ ರೂ ವೆಚ್ಚದಲ್ಲಿ ಸ್ವರ್ಣ ಲೇಪಿತ ಕನಕನ ಕಿಂಡಿಯನ್ನ ನಿರ್ಮಿಸಲಾಗಿದೆ.ಉಡುಪಿಯ ಕೃಷ್ಣ ಮಂಟಪದಲ್ಲಿ ಕನಕನ ಕಿಂಡಿಗೆ ಚಿನ್ನದ ಹೊದಿಕೆ ಸಮರ್ಪಿಸಿ ಸುವರ್ಣ ತೀರ್ಥ ಮಂಟಪ ಉದ್ಘಾಟಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026