LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚುನಾವಣೆಯಲ್ಲಿ ಗೆದ್ದ ಬಿಜೆಪಿ: ದೆಹಲಿ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 27 ವರ್ಷಗಳ ಬಳಿಕ ಐತಿಹಾಸಿಕ ಗೆಲುವು ಸಾಧಿಸಿದೆ. ಈ ಅಭೂತಪೂರ್ವ ಗೆಲುವು ದೊರಕಿಸಿ ಕೊಟ್ಟಿದ್ದಕ್ಕಾಗಿ ದೆಹಲಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ. ಇದರೊಂದಿಗೆ ದೆಹಲಿಯ ಬಿಜೆಪಿ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಪ್ರಧಾನಿ ಮೋದಿ, ಜನಶಕ್ತಿಯೇ ಸರ್ವ ಶ್ರೇಷ್ಠ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಅಭಿವೃದ್ಧಿ ಗೆಲ್ಲುತ್ತದೆ, ಉತ್ತಮ ಆಡಳಿತ ಜಯಗಳಿಸುತ್ತದೆ. ಈ ಅಭೂತಪೂರ್ವ ಮತ್ತು ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿಯ ನನ್ನ ಪ್ರೀತಿಯ ಸಹೋದರಿಯರು ಮತ್ತು ಸಹೋದರರಿಗೆ ನಾನು ನಮಸ್ಕರಿಸುತ್ತೇನೆ. ಜನಾದೇಶಕ್ಕೆ ನಾವು ವಿನೀತರಾಗಿದ್ದೇವೆ ಮತ್ತು ಗೌರವಿಸುತ್ತೇವೆ ಎಂದು ಪೋಸ್ಟ್ ಮಾಡಿದ್ದಾರೆ.

ದೆಹಲಿಯನ್ನು ಅಭಿವೃದ್ಧಿಪಡಿಸುವ, ಜನರ ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುವ ನಮ್ಮ ಗ್ಯಾರಂಟಿಯಿಂದ, ವಿಕಸಿತ ಭಾರತ ನಿರ್ಮಾಣ ಮಾಡುವಲ್ಲಿ ದೆಹಲಿಯು ಪ್ರಧಾನ ಪಾತ್ರ ವಹಿಸುವಂತಾಗಲಿದೆ. ಈ ಬಗ್ಗೆ ನಾವು ಖಾತರಿ ನಿಡುತ್ತೇವೆ. ಇದುವೇ ನಮ್ಮ ಭರವಸೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಇಂದು ಸಂಜೆ ರಾಷ್ಟ್ರ ರಾಜಧಾನಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಪ್ರಧಾನಿ ಮೋದಿ ಭೇಟಿ ನೀಡಿ 7.30ಕ್ಕೆ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಚಲನಚಿತ್ರಗಳ ಬಿಡುಗಡೆಗೆ ಶೀಘ್ರದಲ್ಲಿ ಓಟಿಟಿ ಪ್ರಾರಂಭ :ಮೆಹಬೂಬ್ ಪಾಷಾನ.08 ರಂದು ಕನಕ ಜಯಂತಿ, ಕನಕಶ್ರೀ ಸೇವಾರತ್ನ ಪ್ರಶಸ್ತಿ, ಸಮಾಜದ ಸಾಧಕರಿಗೆ ಸನ್ಮಾನ ಬಿ.ಟಿ.ಜಗದೀಶ್.!ತಲೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಯುವಂತೆ ಮಾಡಲು ಸಾಧ್ಯವಿಲ್ಲ : ಅಣ್ಣಾಮಲೈಮಚ್ಚಿನಿಂದ ಕೊಚ್ಚಿ ಒಂದೇ ಕುಟುಂಬದ ಮೂವರನ್ನು ಕೊಂದು ವ್ಯಕ್ತಿ ಆತ್ಮಹತ್ಯೆವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆಐಎಎಸ್ ಕೋಮಲ್ ಪುನಿಯಾ ಯಶಸ್ಸಿನ ಕಥನಅಂದುಕೊಂಡಂತೆ ಕೆಲಸ ಕಾರ್ಯಗಳು ಕ್ಷಣಾರ್ಧದಲ್ಲಿಯೇ ನೆರವೇರಬೇಕೆಂದರೆ ಈ ಒಂದೇ ಒಂದು ಬಲಿಷ್ಠ ತಾಂತ್ರಿಕ ಬೇರನ್ನು ನಿಮ್ಮ ಹತ್ತಿರ ಇಟ್ಟುಕೊಂಡು ನೋಡಿ ಸಾಕು!ಬಟ್ಟೆ ಒಗೆಯಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳು ನೀರುಪಾಲು.!ಹಿರಿಯ ನಾಗರೀಕರಿಗೆ ಸಿಹಿ ಸುದ್ದಿ.!ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ.!