LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

ನವದೆಹಲಿ: ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಘಾನಾ ದೇಶದ ರಾಷ್ಟ್ರೀಯ ಗೌರವ `ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

5 ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮೊದಲು ಘಾನಾ ದೇಶಕ್ಕೆ ಭೇಟಿ ನೀಡಿದ್ದಾರೆ. 30 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ನೀಡಿದ ಮೊದಲ ಭೇಟಿ ಇದಾಗಿದೆ. ಈ ಸಂದರ್ಭದಲ್ಲಿ ಪ್ರಭಾವಶಾಲಿ ಜಾಗತಿಕ ನಾಯಕ ಎಂದು ಗುರುತಿಸಿ ಘಾನಾದ ಅಧ್ಯಕ್ಷ ಜಾನ್ ಡ್ರಾಮಣಿ ಮಹಾಮ ಅವರು ಮೋದಿಗೆ ರಾಷ್ಟ್ರೀಯ ಗೌರವ `ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್’ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಈ ಗೌರವ ಕೇವಲ ವೈಯಕ್ತಿಕ ಶ್ರಮದಿಂದಲ್ಲ, ಇದು 140 ಕೋಟಿ ಭಾರತೀಯರ ಸಾಧನೆ. ಅವರ ಪರವಾಗಿ ನಾನು ಇದನ್ನು ಸ್ವೀಕರಿಸಿದ್ದೇನೆ. ಈ ಪ್ರಶಸ್ತಿಯನ್ನು ರಾಷ್ಟ್ರದ ಯುವಜನತೆಗೆ ಅರ್ಪಿಸುತ್ತೇನೆ ಹಾಗೂ ಇದು ಭಾರತದ ಶ್ರೀಮಂತ ಪರಂಪರೆಯನ್ನು ಎತ್ತಿತೋರಿಸುತ್ತದೆ ಎಂದು ತಿಳಿಸಿದ್ದಾರೆ. ಈ ಕುರಿತು ಮೋದಿಯವರು ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಘಾನಾದ ರಾಷ್ಟ್ರೀಯ ಪ್ರಶಸ್ತಿ `ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್’ ನೀಡಿದ್ದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ಈ ಪ್ರಶಸ್ತಿಯು ಭಾರತ ಮತ್ತು ಘಾನಾ ನಡುವಿನ ಸ್ನೇಹವನ್ನು ಗಟ್ಟಿಯಾಗಿರಿಸುತ್ತದೆ ಮತ್ತು ದ್ವಿಪಕ್ಷೀಯ ಸಂಬಂಧಗಳಿಗೆ ಒತ್ತು ನೀಡುತ್ತದೆ ಎಂದು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026