LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಮೆರಿಕಕ್ಕೆ ತೆರಳಲು ಪ್ರಿಯಾಂಕ್ ಖರ್ಗೆಗೆ ಅನುಮತಿ- ಕೇಂದ್ರದ ವಿರುದ್ಧ ವಾಗ್ದಾಳಿ

ಬೆಂಗಳೂರು : ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಮೆರಿಕಾದ ಎರಡು ಪ್ರತಿಷ್ಠಿತ ತಾಂತ್ರಿಕ ಕಾರ್ಯಕ್ರಮಗಳಿಗೆ ಭಾಗವಹಿಸಲು ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿತ್ತು. ಈನಿರ್ಧಾರವನ್ನು ಖಂಡಿಸಿ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದ ಎರಡೇ ದಿನಗಳಲ್ಲಿ ಅವರಿಗೆ ಅಮೆರಿಕ ಪ್ರವಾಸ ನಿರ್ಬಂಧವನ್ನು ತೆರವು ಮಾಡಿ ಕೇಂದ್ರ ಸರ್ಕಾರದಿಂದ ಮರು ಆದೇಶ ಹೊರಡಿಸಲಾಗಿದೆ.

ಈ ಬಗ್ಗೆ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಖಚಿತಪಡಿಸಿದ್ದು, ಜೊತೆಗೆ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಟ್ವೀಟ್​ನಲ್ಲಿ ಪ್ರಿಯಾಂಕ್ ಖರ್ಗೆ, ಅಮೆರಿಕಕ್ಕೆ ನಿರ್ಬಂಧವನ್ನು ತೆರವು ಮಾಡುವ ಮೂಲಕ ನನಗೆ ಅಧಿಕೃತ ಭೇಟಿಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ. ಆ ಮೂಲಕ ವಿದೇಶಾಂಗ ಸಚಿವಾಲಯವು ತನ್ನ ಹಿಂದಿನ ನಿರ್ಧಾರವನ್ನು ಹಿಂಪಡೆದುಕೊಂಡಿದೆ ಎಂದಿದ್ದಾರೆ.

ಜೂನ್ 14 ರಿಂದ 27 ರವರೆಗೆ ನಡೆಯಲಿರುವ ಬಯೋ ಇಂಟರ್‌ನ್ಯಾಷನಲ್ ಕನ್ವೆನ್ಷನ್ 2025 ಮತ್ತು ಸ್ಯಾನ್ ಫ್ರಾನ್ಸಿಸ್ಕೋದ ಡಿಸೈನ್ ಆಟೋಮೇಷನ್ ಕಾನ್ಫರೆನ್ಸ್​​ನಲ್ಲಿ ಭಾಗವಹಿಸಲು ತೆರಳಬೇಕಿದ್ದು, ಇದಕ್ಕಾಗಿ ಮೇ 15 ರಂದು ನಾನು ಅನುಮತಿ ಕೋರಿದ್ದು, ಜೂನ್ 4 ರಂದು ಅರ್ಜಿ ತಿರಸ್ಕರಿಸಲಾಯಿತು ಎಂದಿದ್ದಾರೆ.

ಈ ಬಗ್ಗೆ ಖರ್ಗೆ, ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದರು. ಅಮೇರಿಕಕ್ಕೆ ನಾವು ಆಟ ಆಡಲು ಹೋಗಿರಲಿಲ್ಲ. ಕೇಂದ್ರ ಸರ್ಕಾರ ಕಾರಣವಿಲ್ಲದೆ ಅಮೇರಿಕಾ ಅನುಮತಿ ನಿರಾಕರಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026