Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

ಪ್ರಿಯಾಂಕ್ ಖರ್ಗೆ ಗೃಹ ಸಚಿವ ಹುದ್ದೆಗೆ ಸಂಪೂರ್ಣ ನಾಲಾಯಕ್: HDK ವಾಗ್ಧಾಳಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ‘ಸ್ಟಿಂಗ್ ಆಪರೇಷನ್’ ವಿವಾದ ಇದೀಗ ನಾಯಕರ ನಡುವಿನ ನೇರ ವಾಕ್ಸಮರಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಸಂಚಿನ ಪ್ರಕರಣವನ್ನು ಮುಂದಿಟ್ಟುಕೊಂಡು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಅತ್ಯಂತ ತೀಕ್ಷ್ಣ ಪದಗಳಿಂದ ವಾಗ್ದಾಳಿ ನಡೆಸಿದ್ದಾರೆ. 

ಪ್ರಿಯಾಂಕ್ ಖರ್ಗೆ ಗೃಹ ಸಚಿವ ಹುದ್ದೆಗೆ ಸಂಪೂರ್ಣ ನಾಲಾಯಕ್ ಎಂದು ಕಿಡಿಕಾರಿರುವ ಅವರು, ಸ್ಟಿಂಗ್ ನಡೆಸಿದ ಕಿಂಗ್‌ಪಿನ್‌ ಸಿಂಡಿಕೇಟ್‌ನಲ್ಲಿ ಗೃಹ ಸಚಿವರೂ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

'ಅಸಲಿ ಕಿರಾತಕನನ್ನು ಬಿಟ್ಟು ಅಮಾಯಕರ ಬೆನ್ನತ್ತಿದ್ದೀರಿ'

ಸಿದ್ದರಾಮಯ್ಯ ಅವರ ರಾಜಕೀಯ ತೇಜೋವಧೆಗೆ ನಡೆದ ಸ್ಟಿಂಗ್ ಸಂಚಿನಲ್ಲಿ ಪ್ರಿಯಾಂಕ್ ಖರ್ಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಹೆಚ್‌ಡಿಕೆ, "ಸ್ಟಿಂಗ್ ಮಾಡಿದ ಅಸಲಿ ಕಿರಾತಕನನ್ನು ಬಿಟ್ಟು ಅಮಾಯಕರ ಬೆನ್ನತ್ತಿರುವ ನೀವು ಗೃಹಮಂತ್ರಿ ಹುದ್ದೆಗೆ ನಾಲಾಯಕ್. ನಿಮ್ಮ ಪಕ್ಷದ ಹಿರಿಯ ನಾಯಕನನ್ನೇ ಗುರಿಯಾಗಿಸಿಕೊಂಡ ನಟೋರಿಯಸ್ ವ್ಯಕ್ತಿಯನ್ನು ಬಂಧಿಸುವ ಯೋಗ್ಯತೆ ನಿಮಗಿಲ್ಲ. ಆತ ಡಿಸಿಪಿ ಮುಂದೆ ಕಾಲು ಮೇಲೆ ಕಾಲು ಹಾಕಿ ಕೂರುತ್ತಾನೆ, ನಿವೃತ್ತ ಐಪಿಎಸ್ ಅಧಿಕಾರಿಗೆ ಕೊಲೆ ಬೆದರಿಕೆ ಹಾಕುತ್ತಾನೆ, ಪೊಲೀಸ್ ಅಧಿಕಾರಿಗಳನ್ನೇ ಸ್ಟಿಂಗ್ ಮಾಡಿ ಹಫ್ತಾ ವಸೂಲಿ ಮಾಡುತ್ತಾನೆ. ಅಂತಹವನನ್ನು ಸೆದೆಬಡಿಯುವುದು ಬಿಟ್ಟು ಪುಂಗಿ ಊದುತ್ತಿದ್ದೀರಿ," ಎಂದು ಪೊಲೀಸರ ವೈಫಲ್ಯವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

'ಮೀಸಲು ಕ್ಷೇತ್ರ ಬಿಟ್ಟು ಜನರಲ್‌ನಿಂದ ಸ್ಪರ್ಧಿಸಿ'

ಖರ್ಗೆ ಕುಟುಂಬದ ರಾಜಕೀಯ ಹಿನ್ನೆಲೆಯನ್ನು ಕೆದಕಿರುವ ಕೇಂದ್ರ ಸಚಿವರು, "ಸಿದ್ದಾರ್ಥ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಲೂಟಿ ಮಾಡಿದ 'ಬಲಿತ ದಲಿತ'ರೇ, ನಿಮ್ಮ ಮೀಸಲು ಕ್ಷೇತ್ರವನ್ನು ದುರ್ಬಲ ದಲಿತರಿಗೆ ಬಿಟ್ಟುಕೊಟ್ಟು, ಸಾಮಾನ್ಯ ಕ್ಷೇತ್ರದಿಂದ ಗೆದ್ದು ಬನ್ನಿ. ನಿಮಗೆ ಮತ್ತು ನಿಮ್ಮ ತಂದೆಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು? ಇನ್ನೆಷ್ಟು ವರ್ಷ ದಲಿತರ ಹೆಸರಿನಲ್ಲಿ ಅಧಿಕಾರ ಅನುಭವಿಸುತ್ತೀರಿ? ಅಸಲಿ ದಲಿತರಿಗೆ ಅಧಿಕಾರ ಕೊಡಿ," ಎಂದು ಸವಾಲೆಸೆದಿದ್ದಾರೆ.

'ಅಂಗಲಾಚುವ ಜಾಯಮಾನ ನನ್ನದಲ್ಲ'

ತಮ್ಮ ಪಕ್ಷದ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿರುವುದಕ್ಕೆ ಎಚ್ಚರಿಕೆ ನೀಡಿರುವ ಕುಮಾರಸ್ವಾಮಿ, "ನನ್ನ ಹುಡುಗರನ್ನು ರಕ್ಷಿಸಿಕೊಳ್ಳುವುದು ನನಗೆ ಚೆನ್ನಾಗಿ ಗೊತ್ತು. ರಣರಂಗದಿಂದ ಓಡುವುದು ನನ್ನ ಜಾಯಮಾನವಲ್ಲ. ನಾನು ಕೆಪಿಎಸ್‌ಸಿ ಹಾಗೂ ಸ್ಟಿಂಗ್ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದಂತೆ ನೀವು ಎಲ್ಲೆಲ್ಲಿ ರನ್ನಿಂಗ್ ರೇಸ್ ಮಾಡಿದ್ದೀರಿ ಎಂಬುದು ನನಗೆ ತಿಳಿದಿದೆ. ಈ ಕುಮಾರಸ್ವಾಮಿ ಯಾರ ಮುಂದೆಯೂ ಅಂಗಲಾಚುವವನಲ್ಲ. ನಾನು ಪೊಲೀಸ್ ಕಮಿಷನರ್ ಬಳಿ ಏನು ಮಾತನಾಡಿದ್ದೇನೆ ಎಂಬುದನ್ನು ತಿಳಿದುಕೊಳ್ಳಿ," ಎಂದು ಗುಡುಗಿದ್ದಾರೆ.

ಅಲ್ಲದೆ, ಈ ಇಡೀ ಷಡ್ಯಂತ್ರದ ಕೇಂದ್ರಬಿಂದುವಾಗಿರುವ 'ಸ್ಟಿಂಗ್ ಸಾಮ್ರಾಟ'ನ ಸಿಂಡಿಕೇಟ್‌ನಲ್ಲಿ ಪ್ರಿಯಾಂಕ್ ಖರ್ಗೆ ಅವರೂ ಒಬ್ಬರಾಗಿದ್ದಾರೆ ಎಂಬುದು ತಮಗೆ ಸಂಪೂರ್ಣ ಖಚಿತವಾಗಿದೆ ಎಂದು ಕುಮಾರಸ್ವಾಮಿ ಹೇಳಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಹೊಸ ಬಿರುಗಾಳಿ ಎಬ್ಬಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!