LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಪ್ರಿಯಾಂಕ್ ಖರ್ಗೆ ಅವರದು ಹುಚ್ಚುತನದ ಹೇಳಿಕೆ- ಜನರ ಕ್ಷಮೆ ಕೇಳಿ'-ಯಡಿಯೂರಪ್ಪ ಆಗ್ರಹ

ಬೆಂಗಳೂರು : ಆರೆಸ್ಸೆಸ್ ನಿಷೇಧ ಕುರಿತ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆಯವರ ಹೇಳಿಕೆ ಹುಚ್ಚುತನದ್ದು ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟೀಕಿಸಿದ್ದು, ಅವರು ತಮ್ಮ ಹೇಳಿಕೆ ಸಂಬಂಧ ದೇಶದ ಜನರ ಕ್ಷಮಾಪಣೆ ಕೇಳಬೇಕೆಂದು ಆಗ್ರಹಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸುವುದಾಗಿ ಹೇಳಿದ್ದಾರೆ ಎಂದರಲ್ಲದೆ, ಇಡೀ ದೇಶದ ಉದ್ದಗಲಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗರಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ನಾವೆಲ್ಲರೂ ಬೆಳೆದವರು ಎಂದು ಗಮನ ಸೆಳೆದರು.

ಮೊದಲನೆಯದಾಗಿ ನೀವು ಅಧಿಕಾರಕ್ಕೆ ಬರುವುದು ಕನಸಿನ ಮಾತು. ಮುಂದಿನ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗುವುದು ನಿಶ್ಚಿತ. ಇಂಥ ಹುಚ್ಚುತನದ ಹೇಳಿಕೆ ಕೊಟ್ಟು ಜನರ ಮುಂದೆ ಹಗುರ ಆಗದಿರಿ ಎಂದು ನಾನು ಒತ್ತಾಯಿಸುವೆ ಮತ್ತು ಸಲಹೆ ನೀಡುತ್ತೇನೆ ಎಂದು ತಿಳಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026