LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲೋಕಸಭೆ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ :ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡ್ ಸಂಸದೆಯಾಗಿ ಇಂದು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಈ ವೇಳೆ ಪ್ರಿಯಾಂಕಾ ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದಿದ್ದರು. ಕೇರಳದ ಬ್ರೋಕೆಡ್ ಸೀರೆಯನ್ನು ಧರಿಸಿದ್ದರು. ಇತ್ತೀಚೆಗೆ ಪ್ರಕಟಗೊಂಡ ವಯನಾಡ್ ಲೋಕಸಭಾ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಹೆಚ್ಚು ಮತಗಳ ದಾಖಲೆ ಅಂತರದಿಂದ ಗೆಲುವು ಸಾಧಿಸಿರುವ ಪ್ರಿಯಾಂಕಾ ಗಾಂಧಿ, ಆ ಮೂಲಕ ಪ್ರಪ್ರಥಮ ಬಾರಿಗೆ ಚುನಾಯಿತ ಪ್ರತಿನಿಧಿಯಾಗಿದ್ದಾರೆ.

ರಾಹುಲ್‌ ಗಾಂಧಿ ಅವರ ರಾಜೀನಾಮೆ ಬಳಿಕ ತೆರವಾದ ವಯನಾಡ್‌ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ಮಾಡಿದ್ದರು.ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಲೋಕಸಭೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡರೆ, ತಾಯಿ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯರಾಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST