LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅಬ್ಬರ: 3 ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲುವು!

ಕೇರಳ: ಇಂದು ವಯನಾಡು ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಸಿಪಿಐ(ಎಂ) ನೇತೃತ್ವದ ಎಲ್‌ ಡಿಎಫ್‌ ಅಭ್ಯರ್ಥಿ ಸತ್ಯನ್ ಮೊಕೇರಿ ಮತ್ತು ಎನ್​ಡಿಎ ಅಭ್ಯರ್ಥಿ ನವ್ಯಾ ಹರಿದಾಸ್‌ ವಿರುದ್ಧ ದಾಖಲೆ ಮಟ್ಟಕ್ಕೆ ಭಾರೀ ಅಂತರದಲ್ಲಿ ಗೆಲುವು ದಾಖಲಿಸಿರುವ ಪ್ರಿಯಾಂಕಾ ಗಾಂಧಿ, 3 ಲಕ್ಷ ಮತಗಳ ಅಂತರದಲ್ಲಿ ಭರ್ಜರಿ ಪೈಪೋಟಿ ಕೊಟ್ಟು, ಇದೀಗ ಗೆಲುವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಈ ವರ್ಷದ ಆರಂಭದಲ್ಲಿ ಸಹೋದರ ರಾಹುಲ್​ ಗಾಂಧಿ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ತಮ್ಮ ಚೊಚ್ಚಲ ಪೈಪೋಟಿಯನ್ನು ವಯನಾಡಿನಿಂದ ಆರಂಭಿಸಿದ ವಾದ್ರಾಗೆ ಇದೀಗ ಊಹೆಗೂ ಮೀರಿದ ಗೆಲುವು ಸಿಕ್ಕಿದೆ.

ಮಧ್ಯಾಹ್ನ 12:30ರ ಹೊತ್ತಿಗೆ ಪ್ರಿಯಾಂಕಾ ಗಾಂಧಿ 5 ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದುಕೊಂಡಿದ್ದು, 3.47 ಲಕ್ಷ ಮತಗಳ ಅಂತರದಿಂದ ಮುನ್ನಡೆ ಸಾಧಿಸಿ, ವಯನಾಡಿನಲ್ಲಿ ಗೆದ್ದು ಬೀಗಿದ್ದಾರೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಸತ್ಯನ್ ಮೊಕೇರಿ 1.7 ಲಕ್ಷಕ್ಕೂ ಹೆಚ್ಚು ಮತಗಳಿಂದ ಎರಡನೇ ಸ್ಥಾನಕ್ಕೆ ಕುಸಿದರೆ, ಬಿಜೆಪಿಯ ನವ್ಯಾ ಹರಿದಾಸ್ ಸುಮಾರು 95,000 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ. ಒಟ್ಟಾರೆ ಬಹುಮತಗಳ ಅಂತರದಿಂದ ಗೆಲುವು ಕಂಡಿರುವ ಪ್ರಿಯಾಂಕಾ ಗಾಂಧಿ, ವಯನಾಡಿನತ್ತ ಮುಖ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೋತ್ಸಾಹಧನ: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.!ರೈತರಿಗೆ ಗುಡ್ ನ್ಯೂಸ್ .!ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನಬಿ.ಎಸ್ಸಿ. ಪದವಿ ಪಠ್ಯದಲ್ಲಿ ಸಾಹಿತಿ ಡಾ.ಬಿ.ಎಲ್.ವೇಣುರವರ ಕಥೆ ಸೇರ್ಪಡೆ.!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ 05-08-2025.!!ಪುತ್ರದಾ ಏಕಾದಶಿ ದಿನ ದಂಪತಿಗಳು ಹೀಗೆ ಮಾಡಿದರೆ ಸಂತಾನ ಪ್ರಾಪ್ತಿ.!ವಚನ: -ಮನಸಂದ ಮಾರಿತಂದೆ .!'ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ದಾಖಲಾತಿ ಬಿಡುಗಡೆ ಮಾಡುತ್ತಾರೆ'- ಪ್ರಿಯಾಂಕ ಖರ್ಗೆಸಾರಿಗೆ ನೌಕರರ ರಜೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ'ಆ.8ಕ್ಕೆ ರಾಹುಲ್‌ ಗಾಂಧಿ ಪ್ರತಿಭಟನಾ ರ‍್ಯಾಲಿ ಮುಂದೂಡಿಕೆ'- ಡಿಕೆಶಿ71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಕನ್ನಡದಲ್ಲಿ ‘ಕಂದೀಲು’ ಅತ್ಯುತ್ತಮ ಚಿತ್ರ