Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕರ್ನಾಟಕ ಪರ ಗೊತ್ತುವಳಿ : ವರದಿ ಕೇಳಿದ ಸರ್ಕಾರ

ಬೆಳಗಾವಿ : ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸುವ ಸಂಬಂಧ ರಾಜ್ಯ ಸರಕಾರ ವರದಿ ಕೇಳಿದ್ದು ಈ ಬಗ್ಗೆ ಸೋಮವಾರ ಪೌರಾಡಳಿತ ನಿರ್ದೇಶನಾಲಯಕ್ಕೆ ವರದಿ ಸಲ್ಲಿಸುವದಾಗಿ

ಬೆಳಗಾವಿ ಜಿಲ್ಲಾಧಿಕಾರಿ  ಮೊಹಮ್ಮದ್ ರೋಷನ್  ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ತಿಳಿಸಿದ್ದಾರೆ.
       
ಕನ್ನಡ ಸಂಘಟನೆಗಳ ನಿಯೋಗ ಸಚಿವರನ್ನು ಜಿಲ್ಲಾಧಿಕಾರಿ ಕೊಠಡಿಯಲ್ಲಿ
ಭೇಟಿಯಾಗಿ ಪಾಲಿಕೆಯ ಗೊತ್ತುವಳಿ ಅಂಗೀಕರಿಸುವ ಸಂಬಂಧ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳು ಪಾಲಿಕೆಗೆ ತಮ್ಮ ಅಭಿಪ್ರಾಯ ತಿಳಿಸುವ ಬದಲಾಗಿ ಜಾರಿಕೊಳ್ಳುತ್ತಿದ್ದಾರೆಂದು ದೂರಿತು. ನಗರಾಭಿವೃದ್ಧಿ ಕಾರ್ಯದರ್ಶಿಗಳು ಪೌರಾಡಳಿತ ನಿರ್ದೇಶಕರಿಗೆ,ನಿರ್ದೇಶಕರು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ,ಜಿಲ್ಲಾಧಿಕಾರಿಗಳು ಪಾಲಿಕೆಯ ಆಯುಕ್ತರಿಗೆ ವರದಿ ಕೇಳಿದ್ದಾರೆ.ನಾವು ಯಾರ ವಿರುದ್ಧ ನೂರು ದಿನಗಳ ಹೋರಾಟ ಮಾಡುತ್ತ ಬಂದಿದೇವೆಯೋ ಅವರ ವರದಿ ಕೇಳಿದ್ದು ಸರಿಯಲ್ಲ.ಜುಲೈ 8 ರಂದು
ಮುಂಬೈಯಲ್ಲಿ ಅಲ್ಲಿಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗಡಿವಿವಾದ ಸಂಬಂಧ ಉನ್ನತಾಧಿಕಾರ ಸಮಿತಿಯ ಸಭೆ ನಡೆಯಲಿದ್ದು ಯಾವದೇ ಸಮಯದಲ್ಲೂ ಸುಪ್ರೀಂ ಕೋರ್ಟಿನ ಮುಂದೆ ಗಡಿವಿವಾದ ಪ್ರಕರಣ ವಿಚಾರಣೆಗೆ ಬರಲಿದೆ ಎಂದು ತಿಳಿಸಿತು.ಬೆಳಗಾವಿ ಪಾಲಿಕೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿ ಪಾಸಾದರೆ ಅದನ್ನು ಕರ್ನಾಟಕ ಪರವಾಗಿ ಕೋರ್ಟಿನಲ್ಲಿ ಸಲ್ಲಿಸಲು ಅವಕಾಶ ಸಿಗಲಿದೆ ಎಂದು ವಿವರಿಸಿತು.
          
ಗಡಿವಿವಾದ ಪ್ರಕರಣ ರಾಜ್ಯದ ಹಿತಾಸಕ್ತಿಯಿಂದ ಮುಖ್ಯವಾಗಿದ್ದು ಬೆಳಗಾವಿ ಪಾಲಿಕೆಯಲ್ಲಿ ಗೊತ್ತುವಳಿ ಸ್ವೀಕಾರವು ಸಹ ಮಹತ್ವದ್ದು ಎನಿಸಿದೆ.ರಾಜ್ಯ ಸರಕಾರ ನೀಡುವ ಸೂಚನೆಗಳನ್ನು ಪಾಲಿಕೆಯು 
ಅನುಸರಿಸದಿದ್ದರೆ ಪಾಲಿಕೆಯನ್ನು ಕಿತ್ತು ಹಾಕಬಹುದು ಎಂದು ನಿಯೋಗ ಸಲಹೆ ನೀಡಿತು.
       
ನಿಯೋಗದ ಜೊತೆಗೆ ನಡೆದ ಚರ್ಚೆಯ ನಂತರ ಸಚಿವರು ಪಾಲಿಕೆಯ ವಿಷಯವನ್ನು ತಾವು ಗಂಭೀರವಾಗಿ ಪರಿಗಣಿಸಿದ್ದು ಬೆಂಗಳೂರಿಗೆ ಮರಳಿದ ನಂತರ ಸರಕಾರದ ಮಟ್ಟದಲ್ಲಿ ಇದನ್ನು ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.
        
ಪಾಲಿಕೆಯ ಗೊತ್ತುವಳಿಯ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ ಭರವಸೆಯನ್ನು ಕನ್ನಡ ಸಂಘಟನೆಗಳು ಸ್ವಾಗತಿಸಿದ್ದು ಸೋಮವಾರ ಜಿಲ್ಲಾಧಿಕಾರಿಗಳು ರಾಜ್ಯ ಸರಕಾರಕ್ಕೆ ಕಳಿಸುವ ವರದಿಯನ್ನು ನೋಡಿಕೊಂಡು ಬೆಂಗಳೂರಿಗೆ ನಿಯೋಗ ಒಯ್ದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ನಗರಾಭಿವೃದ್ಧಿ ಖಾತೆಯ ಸಚಿವರು,ಮುಖ್ಯ 
ಕಾರ್ಯದರ್ಶಿಗಳನ್ನು ಭೇಟಿಯಾಗಲು ನಿರ್ಧರಿಸಿವೆ.
       ನಿಯೋಗದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ,ನಗರ ಸೇವಕ ರಮೇಶ ಸೊಂಟಕ್ಕೆ,ಕನ್ನಡ ಮುಖಂಡರಾದ ಮಲ್ಲಪ್ಪ ಗುಡಗೇನಟ್ಟಿ,ಎಸ್.ಎಸ್.ಮೂಕನವರ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ