LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ



ಶಿವಮೊಗ್ಗ, ಆಗಸ್ಟ್ 05: : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಪ್ರತಿವರ್ಷದಂತೆ ಈ ವರ್ಷವೂ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ವಿಶ್ವ ವಿದ್ಯಾಲಯದ ವ್ಯಾಪ್ತಿಯ ಏಳು ಜಿಲ್ಲೆಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ದಕ್ಷಿಣಕನ್ನಡ, ಕೊಡಗು ಜಿಲ್ಲೆಯ ಪ್ರಗತಿಪರ ರೈತ/ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಯಶಸ್ವಿ ಪ್ರಗತಿಪರ ರೈತ ಮತ್ತು ರೈತ ಮಹಿಳೆಯರು ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಅಥವಾ ಕೃಷಿ ವಿಜ್ಞಾನ ಕೇಂದ್ರಗಳು ಅಥವಾ ವಿಸ್ತರಣಾ ಶಿಕ್ಷಣ ಘಟಕಗಳಲ್ಲಿ ಅರ್ಜಿ ಅಥವಾ https://www.uahs.edu.in ರಲ್ಲಿ ಲಭ್ಯವಿರುವ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 15, 2025 ರೊಳಗಾಗಿ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ರೈತ/ ರೈತ ಮಹಿಳೆಯರಲ್ಲಿ ಪ್ರತಿ ಜಿಲ್ಲೆಯಿಂದ ಒಬ್ಬ ರೈತ ಮತ್ತು ಒಬ್ಬ ರೈತ ಮಹಿಳೆಯನ್ನು ಆಯ್ಕೆಮಾಡಿ, ಪ್ರಶಸ್ತಿ ಪುರಸ್ಕಾರ ಮಾಡಲಾಗುವುದು, ಈ ಪ್ರಶಸ್ತಿಯನ್ನು ಅಕ್ಟೋಬರ್-2025 ರಲ್ಲಿ ಜರುಗುವ ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ಪ್ರಧಾನ ಮಾಡಲಾಗುವುದು ಎಂದು ವಿಸ್ತರಣಾನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಂಟಿ ನಿರ್ದೇಶಕರು ಅಥವಾ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರುಗಳು, ಕೃಷಿ ವಿಜ್ಞಾನ ಕೇಂದ್ರ, ದೂ.ಸಂ.: ಶಿವಮೊಗ್ಗ- 9480838976, 8277932600, ದಾವಣಗೆರೆ-9480838209, ಚಿಕ್ಕಮಗಳೂರು- 9480838203, 8277930890, ಉಡುಪಿ-9480838202, 8277932500, ಚಿತ್ರದುರ್ಗ-9480838201, ದಕ್ಷಿಣಕನ್ನಡ- 8794706468, 8277931060, ಮಡಿಕೇರಿ- 9480838210, 7259005540 ಗಳನ್ನು ಸಂಪರ್ಕಿಸುವುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು