ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದಲ್ಲಿ ವಸ್ತ್ರ ಸಂಹಿತೆಗೆ ಪ್ರವೇಶಿಸುವ ಭಕ್ತಾದಿಗಳು ಸಂಪ್ರದಾಯಬದ್ಧ ಹಾಗೂ ಸೌಮ್ಯ ವಸ್ತ್ರ ಧರಿಸಿ ಪ್ರವೇಶಿಸಬೇಕೆಂಬ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸುವ ಕುರಿತು ಹಿಂದೂ ಧಾರ್ಮಿಕ ದತ್ತಿ ಇಲಾಖೆಯವರು ಪ್ರಸ್ತಾವನೆ ಮಾಡಿದ್ದಾರೆ.
ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಈ ಕ್ರಮವನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದ್ದು, ದೇವಸ್ಥಾನದ ಪಾವಿತ್ರ್ಯತೆ ಮತ್ತು ಸಂಪ್ರದಾಯಗಳನ್ನು ಕಾಪಾಡುವ ಉದ್ದೇಶದಿಂದ ಭಕ್ತರು ನಿಯಮಿತ ವಸ್ತ್ರಧಾರಣೆ ಪಾಲಿಸಬೇಕೆಂದು ಸೂಚಿಸಲಾಗಿದೆ.
ಈ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕೃತ ಮಾರ್ಗಸೂಚಿಗಳನ್ನು ಪ್ರಕಟಿಸುವ ಸಾಧ್ಯತೆ ಇದೆ.