LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಸಮೃದ್ಧಿಯೇ ನಿತ್ಯ ನವರಾತ್ರಿ

ಶಿವಮೊಗ್ಗ,ಅ.3: ಕಲಿಯುವ ಮಕ್ಕಳಿಗೆ ಉತ್ತಮ ವಿದ್ಯೆ, ಯೋಗ್ಯ ಸಂಸ್ಕಾರ, ರೈತರು ಉಳುವ ಭೂಮಿಗೆ ಹಕ್ಕುಪತ್ರ, ನೀರಾವರಿ ಮತ್ತು ಉತ್ತಮ ಬೆಳೆ ಬಂದರೆ ನಿತ್ಯವೂ ನವ ರಾತ್ರಿಯ ಸಂಭ್ರಮ ಮನೆಮಾಡುತ್ತದೆ  ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಸಾಗರ ತಾಲೂಕು  ಸಿಗಂದೂರು ಚೌಡಮ್ಮ ದೇಗುಲದಲ್ಲಿ ಗುರುವಾರ ದಸರಾ ವೈಭವ ಕಾರ್ಯಕ್ರಮಕ್ಕೆ ಚಂಡೆ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದರಿಂದ ನವರಾತ್ರಿಯ ಸಂಭ್ರಮ ಇಮ್ಮಡಿ ಯಾಗಿದೆ.  ಜಾತಿ- ಧರ್ಮದ ಸಂಕೋಲೆ ತೊರೆದು ಒಳ್ಳೆಯ ಪ್ರಜೆಯಾಗಬೇಕು ಎಂದರೆ,   ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ ಮಾತ್ರ ಸಾಧ್ಯ. ಒಂದೇ ಜಾತಿ, ಒಂದೇ ಮತ ಎಂದು ನಾರಾ ಯಣ ಗುರುಗಳ ಆಶಯವನ್ನು ವೇದಿಕೆ ಮೇಲೆ ಭಾಷಣ ಮಾಡಲಾಗುತ್ತದೆ. ಆದರೆ, ರಾಜಕಾರಣಕ್ಕೆ ಹೋಗಿ ಜಾತಿ, ಧರ್ಮದ ಹೆಸರಿನಲ್ಲಿ ಕಚ್ಚಾಡಿದರೆ, ದೇಶದ ಭವಿಷ್ಯ ಕಟ್ಟಲು ಸಾಧ್ಯವಿಲ್ಲ ಎಂದರು.

ನಾಡಿನ ಅಸಂಖ್ಯಾತ ಭಕ್ತರ ಶ್ರದ್ಧಾ ಕೇಂದ್ರ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಸಮಷ್ಟಿಯ ದೃಷ್ಟಿಕೋನ ವನ್ನು ಹೊಂದಿದೆ. ಧರ್ಮದರ್ಶಿ ರಾಮಪ್ಪ ಅವರು ಅನೇಕ ಸಾಮಾಜಿಕ ಕಾರ್ಯಗಳಿಗೆ ಜೀವ ತುಂಬಿದ್ದಾರೆ. ಅದೇ ರೀತಿ, ಶಿಕ್ಷಣ ಕ್ಷೇತ್ರಕ್ಕೂ ಅಪಾರ ಕೊಡುಗೆ ನೀಡಿದ್ದಾರೆ. ಆದ್ದರಿಂದ, ಮುಂದಿನ ದಿನದಲ್ಲೂ ಈ ಸಹಕಾರ ಶಿಕ್ಷಣ ಕ್ಷೇತ್ರಕ್ಕೆ ಇರಲಿ ಎಂದು ಕೋರಿದರು.  ಶಿಕ್ಷಣ ಇಲಾಖೆಯಲ್ಲಿ ಅನೇಕ ಬದಲಾವಣೆ ತರಲಾಗುತ್ತಿದೆ. ಶರಾವತಿ ಸಂತ್ರಸ್ತರ ಕಣ್ಣೀರು ಒರೆಸುವ ಹೊಣೆ ಸರ್ಕಾರ ಮೇಲಿದೆ. ಇದಕ್ಕೆ ಕ್ರಮವಹಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರ ಹಸಿವು ನೀಗಿಸಲಾಗುತ್ತಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ಇಲಾಖೆ ಕಟಿಬದ್ಧವಾಗಿದೆ ಎಂದರು.

ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ ಮಾತನಾಡಿ, ಚೌಡೇಶ್ವರಿ ದೇವಿಯ ಅನುಗ್ರಹದಿಂದ ಉತ್ತಮ ಮಳೆ- ಬೆಳೆ ಆಗಿದೆ. ಇಲ್ಲಿ ದಸರಾ ಹಬ್ಬವನ್ನು ೩೪ ವರ್ಷದಿಂದ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಶ್ರೀ ಕ್ಷೇತ್ರದಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿಕೊಂಡು ಬರಲಾಗುತ್ತಿದೆ. ಇಲ್ಲಿ ದಶಕಗಳಿಂದ ಬಗೆಹರಿಯದ ಹತ್ತಾರು ಸಮಸ್ಯೆಗಳು ಜೀವಂತವಾಗಿವೆ. ಈ ಎಲ್ಲಾ ಸಮಸ್ಯೆಗಳಿಗೆ ಸರ್ಕಾರ ಮುಕ್ತಿ ಕೊಡಿಸಬೇಕು. ಮುಳುಗಡೆ ರೈತರು ಹಾಗೂ ಬಗರ್ ಹುಕುಂ ಸಾಗುವಳಿ ಸಮಸ್ಯೆಗೆ ಪರಿಹಾರ ಒದಗಿಸಬೇಕು.

75 ವರ್ಷಗಳ ದಾಖಲೆ ಕೇಳಿದರೆ ಮುಳು ಗಡೆ ಸಂತ್ರಸ್ತರಿಗೆ ಕೊಡಲಾಗುವುದಿಲ್ಲ ಈ ಬಗ್ಗೆ ಸರಕಾರ ಗಮನ ಹರಿಸಬೇಕೆಂದು ಹೇಳಿದರು. ಸಿಗಂದೂರು ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರವಿಕುಮಾರ ಮಾತನಾಡಿ, ತಾಲ್ಲೂಕಿನ ಸರ್ಕಾರಿ ಶಾಲೆಗಳ ಸೌಂದ ರ್ಯೀಕರಣಕ್ಕೆ ಸಿಗಂದೂರು ಚಿತ್ತ ಸರ್ಕಾರಿ ಶಾಲೆಗಳತ್ತ ಯೋಜನೆ ಮೂಲಕ ತಾಲ್ಲೂಕಿನ 49 ಕ್ಕೂ ಹೆಚ್ಚು ಶಾಲೆಗಳನ್ನು ಅಭಿವೃದ್ಧಿಪಡಿಸಲಾಗಿದೆ.  ಕರೂರು ಹೂಬಳಿ ತುಮರಿ ಗ್ರಾಂಥಾಲಯಕ್ಕೆ 1 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಸ್ಪರ್ಧಾತ್ಮಕ ಪರೀಕ್ಷಾ ಸಲಕರಣೆ ವಿತರಣೆ ಸೇರಿ ಅನೇಕ ಸಾಮಾಜಿಕ ಕಾರ್ಯಗಳಿಗೆ ಒತ್ತು ನೀಡಲಾಗುತ್ತಿದೆ ಎಂದರು.
ಪ್ರಮುಖರಾದ ಆರ್.ಪ್ರಸನ್ನ ಕುಮಾರ, ಕಲಗೋಡು ರತ್ನಾಕರ, ಡಾ|| ಶ್ರೀನಿವಾಸ ಕರಿಯಣ್ಣ, ಶಾಂತವೀರ ನಾಯ್ಕ, ಹೊಳಿಯಪ್ಪ, ಸರಸ್ವತಿ ಗಣಪತಿ, ಮಂಜಪ್ಪ ಮರಸ, ಯೋಗರಾಜ್ ಯಮಗಳಲತೆ ಮತ್ತಿತರರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST