LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂಧನೂರಿನಲ್ಲಿ ಕಿಶೋರ ಕಾರ್ಮಿಕನ ರಕ್ಷಣೆ; ಮಾಲೀಕನ ವಿರುದ್ಧ ಪ್ರಕರಣ ದಾಖಲು


ರಾಯಚೂರು,ಆ.09, ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಟಾಸ್ಕ್ ಪೋರ್ಸ್ ಸಮಿತಿಯ ಅಧಿಕಾರಿಗಳಿಂದ ಜಿಲ್ಲೆಯ ಸಿಂಧನೂರು ನಗರದ ವಿವಿಧ ಹೋಟೆಲ್‌ಗಳು, ಕಿರಾಣಿ ಅಂಗಡಿಗಳು, ಬೇಕರಿಗಳು, ಗ್ಯಾರೇಜ್‌ಗಳು, ಬಾರ್ ಆ್ಯಂಡ್ ರೆಸ್ಟೋರೆಂಟ್ ಸೇರಿದಂತೆ ಇನ್ನಿತರೆ ಕಡೆ ಆಗಸ್ಟ್ 08ರ ಗುರುವಾರದಂದು ತಪಾಸಣೆ ಮಾಡಿ, ಒಬ್ಬ ಕಿಶೋರ ಬಾಲಕಾರ್ಮಿಕನ್ನು ರಕ್ಷಣೆ ಮಾಡಿದ್ದು, ಈ ಕುರಿತು ಸಿಂಧನೂರಿನಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಿಂಧನೂರು ನಗರದ ಹಟ್ಟಿ ರಸ್ತೆಯ, ನ್ಯಾಷನಲ್ ಲೇಜೌಟ್ ವಿರಾಪಾಪುರದ ಮೆ|| ಮಂಜುನಾಥ ಬೇಕರಿ ಮಾಲೀಕರಾದ ಅಮೀರ ಅಲಿ ತಂದೆ ಅಮೀನುದ್ದೀನ್ ಅವರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಪ್ರಕರಣ ದಾಖಲೆ ಮಾಡಲಾಗಿದೆ.

ಈ ವೇಳೆ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ ಅವರು ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016ರಂತೆ 14ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಗೂ 15ರಿಂದ 18ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ವೇಳೆ ದುಡಿಸಿಕೊಂಡಲ್ಲಿ 50,000/-ರೂ.ಗಳ ದಂಡ ಹಾಗೂ 2ವರ್ಷ ಜೈಲು ಶಿಕ್ಷೆ ಇರುತ್ತದೆ ಎಂದರು.



ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ದುಡಿಯುವ ಮಕ್ಕಳು ಕಂಡುಬoದಲ್ಲಿ ಮಕ್ಕಳ ಸಹಾಯವಾಣಿ-1098ಗೆ ಮಾಹಿತಿ ನೀಡಬಹುದಾಗಿದೆಂದರು.



ಇದೇ ಸಂದರ್ಭದಲ್ಲಿ ಸಿಂಧನೂರು ಕಾರ್ಮಿಕ ನಿರೀಕ್ಷಕರಾದ ವಿಜಯಲಕ್ಷಿö, ಕಂದಾಯ ನಿರೀಕ್ಷಕರಾದ ಲಿಂಗರಾಜ್, ಎಸಿಡಿಪಿಒ ಚಂದ್ರಶೇಖರ, ಶಿಕ್ಷಣ ಇಲಾಖೆಯ ಬಿ.ಆರ್.ಪಿ ಪಂಪಾಪತಿ ಸೇರಿದಂತೆ ಇತರರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು