LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಂದ್ರ ಸರ್ಕಾರ ಹೊರಡಿಸಿರುವ ಟ್ರಾನ್ಸ್ಜೆಂಡರ್ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ

ಚಿತ್ರದುರ್ಗ : ಕೇಂದ್ರ ಸರ್ಕಾರ ಹೊರಡಿಸಿರುವ ಟ್ರಾನ್ಸ್ಜೆಂಡರ್ ತಿದ್ದುಪಡಿ-2026 ರ ಮಸೂದೆಯನ್ನು ವಿರೋಧಿಸಿ ಲೈಂಗಿಕ ಅಲ್ಪಸಂಖ್ಯಾತರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಶುಕ್ರವಾರ ಮಸೂದೆಯ ಜೆರಾಕ್ಸ್ ಪ್ರತಿಯನ್ನು ದಹಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಲಿಂಗತ್ವ ನನ್ನ ಆಯ್ಕೆ, ಸ್ವಯಂ ಗುರುತಿಸುವಿಕೆ ಮಾನವ ಹಕ್ಕು ಎಂಬ ಘೋಷಣೆಗಳನ್ನು ಕೂಗಿದ ಮುಂಗಳಮುಖಿಯರು ಕೇಂದ್ರ ಸರ್ಕಾರ ಕೂಡಲೆ ಈ ಮಸೂದೆಯನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.

ಸ್ಪೂರ್ತಿ ಮಾತನಾಡುತ್ತ ವೈದ್ಯಕೀಯ ತಪಾಸಣೆಗೊಳಗಾಗಿ ಕಡ್ಡಾಯವಾಗಿ ಸರ್ಟಿಫಿಕೇಟ್ ಪಡೆಯಬೇಕೆಂದು ಮಸೂದೆ ಹೇಳುತ್ತದೆ. ಬಲವಂತವಾಗಿ ಯಾರನ್ನಾದರೂ ಸಮ್ಮ ಸಮುದಾಯಕ್ಕೆ ಕರೆದುಕೊಂಡರೆ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಲು ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಬಿಲ್ ಮಂಡಿಸಿರುವುದು ಲಿಂಗತ್ವ ಅಲ್ಪಸಂಖ್ಯಾತರಿಗೆ ವಿರೋಧಿಯಾಗಿದೆ. ಇದನ್ನು ನಾವುಗಳು ಸಹಿಸುವುದಿಲ್ಲ ಎಂದು ಕಿಡಿಕಾರಿದರು.

ಡಾ.ಅರುಂಧತಿ ಮಾತನಾಡಿ 2019 ರಲ್ಲಿದ್ದ ಮಸೂದೆಯಿಂದ ನಮಗೆ ಯಾವುದೇ ತೊಂದರೆಯಿರಲಿಲ್ಲ. ಕೇಂದ್ರ ಸರ್ಕಾರ ಹೊರಡಿಸಿರುವ 2026 ರ ಹೊಸ ಮಸೂದೆ ನಮ್ಮ ಹಕ್ಕುಗಳನ್ನು ಸಂಪೂರ್ಣವಾಗಿ ಕಸಿದುಕೊಳ್ಳುತ್ತಿದೆ. ವೈದ್ಯರ ಮುಂದೆ ಹೋಗಿ ನಮ್ಮ ಲಿಂಗತ್ವವನ್ನು ಪರೀಕ್ಷಿಸಿಕೊಂಡು ಸರ್ಟಿಫಿಕೇಟ್ ಪಡೆಯಬೇಕೆಂದರೆ ಹೇಗೆ ಸಾಧ್ಯ.  ಸ್ವಯಂ ಗುರುತಿಸಿಕೊಳ್ಳುವಿಕೆ ನಮ್ಮ ಜನ್ಮಸಿದ್ದ ಹಕ್ಕು. ಪ್ರಜಾಪ್ರಭುತ್ವದಲ್ಲಿ ಸಮಾನವಾಗಿ ಬದುಕುವ ಹಕ್ಕನ್ನು ಸಂವಿಧಾನ ನೀಡಿದೆ. ಹಾಗಾಗಿ ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಮಸೂದೆಯನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ರವರ ಸಂವಿಧಾನದ ಮೌಲ್ಯವನ್ನು ಎತ್ತಿಹಿಡಿಯುವುದಾಗಿ ದೇಶದ ಪ್ರಧಾನಿ ಮೋದಿ ಹೇಳುತ್ತಿದ್ದಾರೆ. ಕೈಯಲ್ಲಿ ಬೆಣ್ಣೆ, ಬಗಲಲ್ಲಿ ದೊಣ್ಣೆ ಎಂಬಂತೆ ಕೇಂದ್ರ ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರನ್ನು ಹೊಸ ಮಸೂದೆ ಮೂಲಕ ಕೀಳಾಗಿ ಕಾಣುತ್ತಿರುವುದು ಸರಿಯಲ್ಲ. ತಕ್ಷಣವೆ ಮಸೂದೆಯನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿದರು.

ಚಂದ್ರಮ್ಮ, ಆವಂತಿಕ, ಅಲೈಕ, ಸಾನಿಯ, ಅಮೂಲ್ಯ, ಹರ್ಷಿಣಿ, ಅನು, ನೂತನ, ರೋಜಿ, ಸುಬ್ಬಲಕ್ಷ್ಮಿ, ವಿದ್ಯಾ, ಕೃಷ್ಣವೇಣಿ, ಅಂಬಿ, ಗೌಸಿ, ಸುಗುಣ, ಹೊಳೆಯಪ್ಪಸಾಕ್ಯ ಪ್ರಭಾವತಿ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026