LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೆಮಿಕಲ್ಸ್ ಫರ್ಟಿಲೈಜರ್ಸ್ ಮತ್ತು ಪೆಸ್ಟಿಸೈಡ್ಸ್ ಮಾರಾಟಗಾರರ ಸಂಘದಿಂದ ವಿವಿಧ ಬೇಡಿಕೆ ಆಗ್ರಹಿಸಿ ಪ್ರತಿಭಟನೆ.!

 

ಚಿತ್ರದುರ್ಗ : ಡಿಎಪಿ ಮತ್ತು ಯೂರಿಯಾ ಗೊಬ್ಬರದ ಜೊತೆಗೆ ಒತ್ತಾಯವಾಗಿ ಬೇರೆ ಉತ್ಪಾದನೆಗಳನ್ನು ಲಿಂಕ್ಗೊಳಿಸುವುದನ್ನು ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸೀಡ್ಸ್ ಕೆಮಿಕಲ್ಸ್ ಫರ್ಟಿಲೈಜರ್ಸ್ ಮತ್ತು ಪೆಸ್ಟಿಸೈಡ್ಸ್ ಮಾರಾಟಗಾರರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಎಲ್ಲಾ ರಸಗೊಬ್ಬರಗಳ ಎಂಆರ್ಪಿ. ಮೇಲೆ ಎಂಟು ಪರ್ಸೆಂಟ್ ಡೀಲರ್ ಲಾಭಾಂಶವಿರುವಂತೆ ನೋಡಿಕೊಳ್ಳಬೇಕು. ಗೊಬ್ಬರ, ಬೀಜ, ಕೀಟನಾಶಕ ಸ್ಯಾಂಪಲ್ ಕಳಪೆ ಬಂದಾಗ ಕಂಪನಿಯವರ ಮೇಲೆ ಮಾತ್ರ ಕೇಸ್ ಹಾಕಿ ಡೀಲರ್ಗಳನ್ನು ಸಾಕ್ಷಿಯಾಗಿ ಪರಿಗಣಿಸಬೇಕು. ಡೀಲರ್ಗಳಿಂದ ಸ್ಯಾಂಪಲ್ ಡ್ರಾ ಮಾಡಿದಾಗ ಸ್ಯಾಂಪಲ್ಲಿನ ಹಣವನ್ನು ಕಡ್ಡಾಯವಾಗಿ ಡೀಲರ್ಗಳಿಗೆ ಪಾವತಿಸಬೇಕು. ಅಧಿಕಾರಿಗಳು ತಪಾಸಣೆಗಾಗಿ ಅಂಗಡಿಗಳಿಗೆ ಭೇಟಿ ಕೊಟ್ಟ ನಂತರ ಮಾಧ್ಯಮಗಳಿಗೆ ಹೇಳಿಕೆಗಳನ್ನು ಕೊಡುವಾಗ ದಾಳಿ ಎನ್ನುವ ಪದ ಮತ್ತು ಅಂಗಡಿಗಳ ಫೋಟೋಗಳನ್ನು ಬಳಸಬಾರದು. ಎಫ್ಐಡಿ. ಮುಖಾಂತರ ಯೂರಿಯಾ ಗೊಬ್ಬರ ಮಾರಾಟ ಮಾಡುವ ಆದೇಶವನ್ನು ಸ್ವಾಗತಿಸುತ್ತೇವೆ. ನೀರಾವರಿ ಮತ್ತು ಒಣ ಬೇಸಾಯಗಾರರಿಗೆ ಬೆಳೆಗಳ ಆಧಾರದ ಮೇಲೆ ರಸಗೊಬ್ಬರ ದೊರೆಯುವಂತೆ ನೋಡಿಕೊಳ್ಳಬೇಕು. ಎಫ್ಐಡಿ ಮುಖಾಂತರ ಡಿಎಪಿ ಮತ್ತು ಯೂರಿಯಾ ಮಾರಾಟ ಮಾಡುವುದನ್ನು ಹಿಂಗಾರು ಬೆಳೆಗಳವರೆಗೆ ಕಡ್ಡಾಯಗೊಳಿಸಬೇಕು. ಬೀಜ ಮಾರಾಟ ಯ್ಯಾಪನ್ನು ಮಾರಾಟ ಸ್ನೇಹಿಯಾಗಿ ರೂಪಿಸಬೇಕೆಂದು ಪ್ರತಿಭಟನಾಕಾರರು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಜಗದೀಶ್, ಸಿದ್ದಲಿಂಗಮೂರ್ತಿ, ಮಂಜುನಾಥ್, ಬಸವರಾಜ್, ಹರ್ಷ, ಅಶೋಕ್, ಗಿರೀಶ್, ತಿಪ್ಪೇಸ್ವಾಮಿ, ಚಿದಾನಂದ, ಮನೋಜ್ಕುಮಾರ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026