Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಯುರೋಪ್‌ನ ಹಲವು ದೇಶಗಳಲ್ಲಿ ಭುಗಿಲೆದ್ದ ಪ್ರತಿಭಟನೆ, ಹಿಂಸಾಚಾರ

ಲಂಡನ್, ಅ.25: ಬೆಲೆ ಏರಿಕೆ, ನಿರುದ್ಯೋಗ, ಕಡಿಮೆ ವೇತನ ಹಾಗೂ ಸಾರ್ವಜನಿಕ ಸೇವೆಗಳಲ್ಲಿನ ಸಮಸ್ಯೆಗಳನ್ನು ವಿರೋಧಿಸಿ ಯುರೋಪ್‌ನ ಹಲವು ರಾಷ್ಟ್ರಗಳಲ್ಲಿ ಜನರು ಬೀದಿಗಿಳಿದಿದ್ದು, ಕೆಲವು ನಗರಗಳಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. ಫ್ರಾನ್ಸ್, ಇಟಲಿ, ಸ್ಪೇನ್, ಪೋರ್ಚುಗಲ್, ಅಲ್ಬೇನಿಯಾ ಹಾಗೂ ಬೆಲ್ಜಿಯಂನಲ್ಲಿ ನಡೆದ ಬೃಹತ್ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಫ್ರಾನ್ಸ್‌ನಲ್ಲಿ ಪರಿಸ್ಥಿತಿ ತೀವ್ರಗೊಂಡಿದ್ದು, ಪೊಲೀಸರೊಂದಿಗೆ ನಡೆದ ಘರ್ಷಣೆಗಳ ಬಳಿಕ ಸುಮಾರು 1,000 ಮಂದಿಯನ್ನು ಬಂಧಿಸಲಾಗಿದೆ. ಸರ್ಕಾರದ ಪ್ರಕಾರ 4.10 ಲಕ್ಷ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರೆ, ಕಾರ್ಮಿಕ ಸಂಘಟನೆಗಳು ಈ ಸಂಖ್ಯೆ 8 ಲಕ್ಷದಷ್ಟಿದೆ ಎಂದು ಹೇಳಿವೆ.

ಪ್ಯಾರಿಸ್ ಸೇರಿದಂತೆ ಹಲವು ನಗರಗಳಲ್ಲಿ ಪ್ರತಿಭಟನಾಕಾರರು ರಸ್ತೆ ತಡೆ ನಿರ್ಮಿಸಿ ಪೊಲೀಸರತ್ತ ವಸ್ತುಗಳನ್ನು ಎಸೆದಿದ್ದಾರೆ. ಕೆಲವು ಕಡೆ ವಾಹನಗಳು ಹಾಗೂ ಅಂಗಡಿಗಳಿಗೆ ಹಾನಿಯಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು, ಲಾಠಿ ಪ್ರಹಾರ ಹಾಗೂ ಜಲಫಿರಂಗಿ ಬಳಸಿದ್ದಾರೆ. ದೇಶಾದ್ಯಂತ ಸುಮಾರು 70,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮಾರ್ಸೆಲ್‌ನಲ್ಲಿ ಕಸದ ತೊಟ್ಟಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಬೋರ್ಡೊ ಮತ್ತು ಲಿಯಾನ್ ನಗರಗಳಲ್ಲಿ ರಸ್ತೆ ತಡೆ ಹಾಗೂ ಪೊಲೀಸರೊಂದಿಗೆ ಘರ್ಷಣೆಗಳು ನಡೆದಿವೆ. ಕಳೆದ ವಾರಕ್ಕೆ ಹೋಲಿಸಿದರೆ ಈ ಬಾರಿ ಆಸ್ತಿಪಾಸ್ತಿ ಹಾನಿ ಕಡಿಮೆಯಾಗಿದೆ ಎಂದು ಫ್ರಾನ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇಟಲಿಯ ಮಿಲನ್, ರೋಮ್ ಹಾಗೂ ಟುರಿನ್ ನಗರಗಳಲ್ಲಿಯೂ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಕಳೆದ ವಾರ ಸಂಭವಿಸಿದ ಹಿಂಸಾಚಾರ ಮರುಕಳಿಸದಂತೆ ಮಿಲನ್‌ನಲ್ಲಿ ಹೆಚ್ಚುವರಿಯಾಗಿ 500 ಸೈನಿಕರನ್ನು ನಿಯೋಜಿಸಲು ಪ್ರಧಾನಿ ಜಾರ್ಜಿಯಾ ಮೆಲೋನಿ ಆದೇಶಿಸಿದ್ದಾರೆ.

ಮಿಲನ್‌ನಲ್ಲಿ ಬಹುತೇಕ ಶಾಂತಿಯುತ ಪ್ರತಿಭಟನೆ ನಡೆದಿದ್ದರೂ, ರೋಮ್‌ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತು. ಪ್ರತಿಭಟನಾಕಾರರು ಪೊಲೀಸರತ್ತ ಬಾಟಲಿ ಹಾಗೂ ಪಟಾಕಿಗಳನ್ನು ಎಸೆದ ಹಿನ್ನೆಲೆಯಲ್ಲಿ ಅಶ್ರುವಾಯು ಮತ್ತು ಜಲಫಿರಂಗಿ ಬಳಸಲಾಯಿತು. ಇಂಧನ ದರ ಏರಿಕೆ ಖಂಡಿಸಿ ಕೆಲವರು ವಿದ್ಯುತ್ ಬಿಲ್‌ನ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಸ್ಪೇನ್‌ನ ಬಾರ್ಸಿಲೋನಾದಲ್ಲಿ ಅಂಗಡಿಗಳ ಮೇಲೆ ದಾಳಿ ಹಾಗೂ ಬೆಂಕಿ ಹಚ್ಚಿದ ಘಟನೆಗಳು ವರದಿಯಾಗಿವೆ. ಬೆಲ್ಜಿಯಂನ ಬ್ರಸೆಲ್ಸ್ ಮತ್ತು ಅಲ್ಬೇನಿಯಾದ ಟಿರಾನಾದಲ್ಲಿಯೂ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಬಲಪ್ರಯೋಗ ನಡೆಸಿದ್ದಾರೆ.

ವಸತಿ ವೆಚ್ಚ ಏರಿಕೆ, ಶಿಕ್ಷಣಕ್ಕೆ ಅನುದಾನ ಕೊರತೆ, ಕಾರ್ಮಿಕರ ವೇತನ ಹಾಗೂ ಸರ್ಕಾರಗಳ ಆರ್ಥಿಕ ನೀತಿಗಳ ವಿರುದ್ಧ ವಿವಿಧ ಸಂಘಟನೆಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸುತ್ತಿವೆ. ಹಲವು ರಾಷ್ಟ್ರಗಳಲ್ಲಿ ಏಕಕಾಲಕ್ಕೆ ಉಂಟಾಗಿರುವ ಜನಾಕ್ರೋಶ ಯುರೋಪ್ ಸರ್ಕಾರಗಳ ಮುಂದೆ ಹೊಸ ಸವಾಲು ಸೃಷ್ಟಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ