LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಸತಿ ಜಿಹಾದ್ ವಿರೋಧಿಸಿ ಜೂನ್ 25 ಕ್ಕೆ ಪ್ರತಿಭಟನೆ

ಶಿವಮೊಗ್ಗ,ಜೂ.21 :  ಈ ಹಿಂದೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಳ ಅಭಿವೃದ್ಧಿಗೆ ಮೀಸಲಿಟ್ಟ ಸಾವಿರಾರು ಕೋಟಿ ಹಣವನ್ನು ಗ್ಯಾರಂಟಿ" ಯೋಜನೆಗೆ ಬಳಸಿಕೊಂಡು ಅನ್ಯಾಯ ಮಾಡಿದ ಸಿದ್ದರಾಮಯ್ಯ ಸರ್ಕಾರ ಈಗ ವಸತಿ ಯೋಜನೆಯ ಮನೆಗಳನ್ನು ಈ ಸಮುದಾಯದ ಜನರಿಂದ ಕಸಿದುಕೊಂಡು ಅಲ್ಪಸಂಖ್ಯಾತರಿಗೆ ವಿತರಿಸಲು ಹೊರಟಿದೆ ಸರ್ಕಾರದ ಸಂವಿಧಾನ ವಿರೋಧಿಯಾದ ತನ್ನ ಈ ನಿರ್ಧಾರವನ್ನು ಕೂಡಲೆ ಹಿಂಪಡೆಯಬೇಕು ಎಂಬ ಬೇಡಿಕೆಯನ್ನಿಟ್ಟು ರಾಷ್ಟ್ರಭಕ್ತರ ಬಳಗ ಜೂನ್ 25 ರಂದು ಪ್ರತಿಭಟನೆ ನಡೆಸಲಿದೆ.

ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಬಳಗದ ಯುವ ಮುಕಂಡ ಕೆ. ಇ. ಕಾಂತೇಶ್, ಬಳಗದ ಸ್ಥಾಪಕ ಕೆ.ಎಸ್.ಈಶ್ವರಪ್ಪನವರ ನೇತೃತ್ವದಲ್ಲಿ 25 ರ ಬುಧವಾರ ಬೆಳಿಗ್ಗೆ 10 ಗಂಟೆಗೆ ರಾಮಣ್ಣ ಶೆಟ್ಟಿ ಪಾರ್ಕ್‌ನಿಂದ ಶಿವಪ್ಪನಾಯಕ ವೃತ್ತದವರೆಗೆ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದು. ಇದು ಸರ್ಕಾರಕ್ಕೆ ಮೊದಲ ಎಚ್ಚರಿಕೆಯಾಗಿದ್ದು ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು.

ರಾಜ್ಯ ಸರ್ಕಾರ ಮುಸ್ಲಿಮರನ್ನು ಓಲೈಸಿಕೊಂಡು ತುಷ್ಟಿಕರಣದ ರಾಜಕೀಯ ಮಾಡಿ ಮತಬ್ಯಾಂಕ್ ಗಟ್ಟಿಗೊಳಿಸಲು ಈಗ ವಸತಿ ಜಿಹಾದ್ ಮಾಡಲು ಹೊರಟಿದೆ. ಈ ಹಿಂದೆ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿ ಇನ್ನುಳಿದ ಧರ್ಮೀಯರಿಗೆ ಅನ್ಯಾಯ ಮಾಡಿದ್ದ ಸಿದ್ದರಾಮಯ್ಯನವರ ಸರ್ಕಾರ ಈಗ ವಸತಿ ಯೋಜನೆಯಡಿಯಲ್ಲಿ ನಿರ್ಮಾಣವಾಗುವ ಮನೆಗಳಲ್ಲಿ ಮುಸ್ಲಿಮರಿಗೆ 15 % ಮೀಸಲಿಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಬುದ್ಧ, ಬಸವ, ಅಂಬೇಡ್ಕರ್ ಹೆಸರು ಹೇಳುವ ಸಿದ್ದರಾಮಯ್ಯನವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ವಿರೋಧಿಸಿದ್ದ ಧರ್ಮಾದಾರಿತ ಮೀಸಲಾತಿಯನ್ನು ಅವರ ತತ್ವಕ್ಕೆ ತಿಲಾಂಜಲಿ ಇಡುತ್ತಿದ್ದಾರೆ ಎಂದರು.

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು" ಎಂಬ ಮಾತನ್ನು ಈಗ ಸರ್ವವೂ ಸಾಬರ ಪಾಲು” ಎಂದು ನಿರೂಪಿಸಲು ಹೊರಟಿದೆ. ಹಿಂದುಳಿದ ವರ್ಗಗಳ, ದಲಿತರ ಉದ್ಧಾರಕ ಎಂದು ಹೇಳಿಕೊಂಡು ಅಧಿಕಾರಕ್ಕೇರಿದ ಸಿದ್ದರಾಮಯ್ಯನವರು ಈಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ದಲಿತ ಸಮೂದಾಯದ ಬಡವರಿಗಾಗಿ ವಸತಿ ಯೋಜನೆಯಲ್ಲಿ ನಿರ್ಮಿಸುವ ಮನೆಗಳಲ್ಲಿ ಅಲ್ಪಸಂಖ್ಯಾತರಿಗೆ 15 % ಮನೆಗಳನ್ನು ಮೀಸಲಿಡಲು ಹೊರಟಿರುವುದು ಈ ಸಮುದಾಯಗಳಿಗೆ ಮಾಡುತ್ತಿರುವ ಘೋರ ಅನ್ಯಾಯ ಎಂದರು.

ಇದು ಸಂವಿಧಾನವು ಕಲ್ಪಿಸಿರುವ ಮೀಸಲಾತಿ ವ್ಯವಸ್ಥೆಯ ಸ್ಪಷ್ಟ ದುರ್ಬಳಕೆಯಾಗಿದೆ. ಈಗಾಗಲೇ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿಯೇ 1000 ಕೋಟಿ ಹಣವನ್ನು ಮೀಸಲಿಡಲಾಗಿದೆ. ಆದರೂ ಈಗ ಬಡವರಿಗಾಗಿ ಮೀಸಲಿರುವ ಮನೆಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ಹಂಚಲು ಹೊರಟಿರುವ ಸರ್ಕಾರದ ನಡೆ ಖಂಡನೀಯ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಬಳಗದ ಮುಖಂಡರಾದ ಎಂ. ಶಂಕರ್, ವಿಶ್ವಾಸ್, ಜಾಧವ್ ಮೊದಲಾದವರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST