Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಮಾಲಿನ್ಯ ನಿಯಂತ್ರಣ ಮಂಡಲಿ ದೌರ್ಜನ್ಯ ಖಂಡಿಸಿ ಇಂದು ಪ್ರತಿಭಟನೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನೇಯ್ಗೆ ಉಧ್ಯಮ ನಗರದ ಮಧ್ಯಮ ವರ್ಗದವರ ಜೀವನಾಡಿ
ರೇಷ್ಮೆ ಹಾಗೂ ಕೃತಕ ರೇಷ್ಮೆಗೆ ಬಣ್ಣ ಹಚ್ಚುವ ಘಟಕಗಳ ಮೇಲೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಸೆಪ್ಟೆಂಬರ್ 17 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನೇಕಾರರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ. ಹೇಮಂತರಾಜು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ಕಳೆದ ನಾಲ್ಕು ವರ್ಷಗಳಿಂದ ಬಣ್ಣದ ಘಟಕದ ಮಾಲೀಕರಿಗೆ ನಿರಂತರವಾಗಿ ನೋಟಿಸ್‌ಗಳನ್ನು ನೀಡುವ ಜೊತೆಗೆ, ಘಟಕಗಳನ್ನು ಮುಚ್ಚುವಂತೆ ಒತ್ತಡ ಹೇರುತ್ತಿರುವುದಾಗಿ ಆರೋಪಿಸಿದರು. ಇತ್ತೀಚೆಗಷ್ಟೇ ನಗರದ ಹೊರವಲಯದಲ್ಲಿ ಲಿಂಗರಾಜು ಎಂಬುವರ ಘಟಕದಲ್ಲಿ ಎಲ್ಲಾ ನಿಯಮಗಳನ್ನು ಪಾಲಿಸುತ್ತಿದ್ದರೂ ಜಾಗದ ಮಾಲೀಕರಿಗೆ ಭಯ ಹುಟ್ಟಿಸಿ ಬಣ್ಣ ಮಾಡುವ ಉಪಕರಣ ಹಾಗೂ ಒಲೆಗಳನ್ನು ಜೆ.ಸಿ.ಬಿ. ಮೂಲಕ ಧ್ವಂಸ ಮಾಡಿರುವ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

ಸಣ್ಣ ಮಟ್ಟದ ಬಣ್ಣದ ಘಟಕಗಳ ಮಾಲೀಕರು ಕಾನೂನುಬದ್ದವಾಗಿ ನಡೆದುಕೊಂಡರೂ ಅಧಿಕಾರಿಗಳು ಕೆಲವರ ಒತ್ತಡಕ್ಕೆ ಮಣಿದು ಅನಾವಶ್ಯಕ ತೊಂದರೆ ನೀಡುತ್ತಿದ್ದಾರೆ. ಕೈಗಾರಿಕಾ ಪ್ರದೇಶದಲ್ಲಿರುವ ನೂರಾರು ದೊಡ್ಡ ಕಾರ್ಖಾನೆಗಳು ಮಾಲಿನ್ಯ ಮಾಡುತ್ತಿದ್ದರೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಮಂಡಳಿ ಅಲ್ಪಸಂಖ್ಯೆಯ ನೇಕಾರರ ಜೀವನಕ್ಕೆ ಆಸರೆಯಾಗಿರುವ ಘಟಕಗಳ ಮೇಲಷ್ಟೇ ಕ್ರಮಕ್ಕೆ ಮುಂದಾಗುತ್ತಿರುವುದು ಅನ್ಯಾಯ ಎಂದು ಹೇಮಂತರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಳೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಇರುವ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮುಂದೆ ನೇಕಾರರ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ